ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಭಾವನಾ ಸುಗಮ ಸಂಗೀತ ಬಳಗ ಸುಳ್ಯ ಇವುಗಳ ಆಶ್ರಯದಲ್ಲಿ ದೇಶಭಕ್ತಿ ಗೀತೆ ಗಾಯನ ಅಭಿಯಾನ ಕಾರ್ಯಕ್ರಮವು ಆ.9 ರಂದು ಸರಕಾರಿ ಪ್ರೌಢಶಾಲೆ ಆಲೆಟ್ಟಿಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಗೋಪಾಲಕೃಷ್ಣ ಉದ್ಘಾಟಿಸಿ ಶುಭಹಾರೈಸಿದರು.
ವೇದಿಕೆಯಲ್ಲಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚಂದ್ರಶೇಖರ ಪೇರಾಲು, ಗೌರವ ಕಾರ್ಯದರ್ಶಿ ತೇಜಸ್ವಿ ಕಡಪಳ, ಭಾವನಾ ಸುಗಮ ಸಂಗೀತ ಬಳಗದ ನಿರ್ದೇಶಕ ಮತ್ತು ಗಾಯಕ ಕೆ.ಆರ್.ಗೋಪಾಲಕೃಷ್ಣ, ಜಿಲ್ಲಾ ಸಾಹಿತ್ಯ ಪರಿಷತ್ತಿನ ಸದಸ್ಯ ರಾಮಚಂದ್ರ ಪಲ್ಲತಡ್ಕ, ಗಾಯಕಿಯರಾದ ಶುಭದಾ ಆರ್.ಪ್ರಕಾಶ್, ಲಿಪಿ ಶ್ರೀ ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕಿ ವಿಜಯಲಕ್ಷ್ಮಿ ಸ್ವಾಗತಿಸಿ, ಸಹ ಶಿಕ್ಷಕಿ ರೇವತಿ ವಂದಿಸಿದರು.ಕಾರ್ಯಕ್ರಮವನ್ನು ಶಿಕ್ಷಕಿ ವೀಣಾ.ಡಿ ನಿರೂಪಿಸಿದರು.