ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದ್ದ ಮೂರು ಪ್ರಮುಖ ಆರೋಪಿಗಳಾದ ಶಿಯಾಬ್,ಬಶೀರ್ ಮತ್ತು ರಿಯಾಜ್ ರನ್ನು ಬಂಧನ ಮಾಡಲಾಗಿದ್ದು, ಮೂವರು ಸುಳ್ಯ ಮೂಲದವರು ಎಂಬ ಮಾಹಿತಿ ಪೊಲೀಸ್ ಮೂಲಗಳಿಂದ ಲಭ್ಯವಾಗಿದೆ.
ಮಧ್ಯಾಹ್ನ ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ. ಪ್ರವೀಣ್ ನೆಟ್ಟಾರು ಹಂತಕರಲ್ಲಿ ಬಂಧಿತ ಆರೋಪಿಗಳಲ್ಲಿ ಹೆಚ್ಚಿನವರು ಎಸ್.ಡಿ.ಪಿ.ಐ ಪದಾಧಿಕಾರಿಗಳಾಗಿದ್ದಾರೆ. ಕೊಲೆ ಪ್ರತೀಕಾರಕ್ಕಾಗಿ ನಡೆಯಿತೇ ಅಥವಾ ವೃತ್ತಿ ವೈಷಮ್ಯದಿಂದ ನಡೆಯಿತೇ ಎಂಬ ಬಗ್ಗೆ ಸ್ಪಷ್ಟ ಉತ್ತರ ಇಂದಿನ ಪೊಲೀಸ್ ವರಿಷ್ಠಾಧಿಕಾರಿಗಳ ಪತ್ರಿಕಾಗೋಷ್ಠಿಯ ವೇಳೆ ತಿಳಿದು ಬರಲಿದೆ.