75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಕಡಿಯಾಳಿಯಲ್ಲಿರುವ ಪಕ್ಷದ ಕಛೇರಿಯಿಂದ ಸರ್ವೀಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ವರೆಗೆ ಆಯೋಜಿಸಿದ ತಿರಂಗಾ ಯಾತ್ರೆಗೆ ಉಸ್ತುವಾರಿ ಸಚಿವರಾದ ಎಸ್.ಅಂಗಾರರವರು ಚಾಲನೆ ನೀಡಿ ಜಾಥಾದಲ್ಲಿ ಪಾಲ್ಗೊಂಡು ಕ್ಲಾಕ್ ಟವರ್ ಬಳಿ ಇರುವ ಗಾಂಧಿ ಪ್ರತಿಮೆಗೆ ಪುಷ್ಪಾರ್ಚಣೆ ಮಾಡಿದರು.
ಈ ಸಂದರ್ಭದಲ್ಲಿ ಶಾಸಕರಾದ ಕೆ ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ. ಅಧ್ಯಕ್ಷರಾದ ಉದಯ್ ಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಪಕ್ಷದ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.