ಇಂದು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬೆಳ್ಳಾರೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗಿರೀಶ್ ಎಂ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಬೇಬಿ ಸಿಸಿ, ಬೆಳ್ಳಾರೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮತ್ತು ಬೆಳ್ಳಾರೆ 108 ಅಂಬ್ಯುಲೆನ್ಸ್ ಸಿಬ್ಬಂದಿಗಳು ಹಾಜರಿದ್ದರು. ತಾಲ್ಲೂಕು ಕ್ಷಯ ಚಿಕಿತ್ಸಾ ಘಟಕದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ ಸ್ವಾಗತಿಸಿ, ವಂದಿಸಿದರು.
- Wednesday
- December 4th, 2024