75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆ.15ರಂದು ಕೊಡಿಯಾಲಬೈಲು ಎಂ.ಜಿ.ಎಂ.ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಚಂದ್ರ ಕೋಲ್ಟಾರ್ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ನಿವೃತ್ತ ಸೇನಾಧಿಕಾರಿ ಅಡ್ಡಂತಡ್ಕ ದೇರಣ್ಣಗೌಡ ಭಾಗವಹಿಸಿ, ಧ್ವಜಾರೋ ಹಣ ನೆರವೇರಿಸಿದರು.ವೇದಿಕೆಯಲ್ಲಿ ಶಾಲಾ ಸಂಚಾಲಕ ದೊಡ್ಡಣ್ಣ ಗೌಡ ಬರಮೇಲು, ಗೌಡ ಸೋಶಿಯೋ ಎಜುಕೇಶನ್ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ನಿತ್ಯಾನಂದ ಮುಂಡೋಡಿ, ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಬೆಳ್ಯಪ್ಪ ಗೌಡ, ಶಾಲಾ ಮುಖ್ಯ ಶಿಕ್ಷಕಿ ಶೃತಿ ಉಪಸ್ಥಿತರಿ ದ್ದರು. ಈ ಸಂದರ್ಭದಲ್ಲಿ ನಿವೃತ್ತ ಸೇನಾಧಿಕಾರಿ ದೇರಣ್ಣ ಗೌಡರನ್ನು ಸನ್ಮಾನಿಸ ಲಾಯಿತು.ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.