ದುಗ್ಗಲಡ್ಕ: ಮಿತ್ರ ಯುವಕ ಮಂಡಲ ಕೊಯಿಕುಳಿ ಹಾಗೂ ಕುರಲ್ ತುಳುಕೂಟ ಇದರ ಆಶ್ರಯದಲ್ಲಿ ರೋಟರ್ಯಾಕ್ಟ್ ಕ್ಲಬ್ ಇದರ ಸಹಯೋಗದೊಂದಿಗೆ ಶ್ರೀಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು ದುಗ್ಗಲಡ್ಕ ಪ್ರೌಢಶಾಲಾ ವಠಾರದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಕುರಲ್ ತುಳುಕೂಟದ ಸಂಚಾಲಕ ಕೆ.ಟಿ.ವಿಶ್ವನಾಥ ವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯಮಿ ಶ್ರೀಕಾಂತ್ ಮಾವಿನಕಟ್ಟೆ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ನ.ಪಂ.ಸದಸ್ಯೆ ಶ್ರೀಮತಿ ಶಶಿಕಲಾ ನೀರಬಿದಿರೆ, ದುಗ್ಗಲಡ್ಕ ಪ್ರೌಢಶಾಲಾ ಮುಖ್ಯ ಶಿಕ್ಷಕ ಸುರೇಶ್ ಕುಮಾರ್ ಪಿ, ನಿವೃತ್ತ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಎ.ಯು., ಸಮಾಜರತ್ನ ಮಂಜುನಾಥ ಬಳ್ಳಾರಿ, ದುಗ್ಗಲಡ್ಕ ಪ್ರೌಢಶಾಲಾ ಶಿಕ್ಷಕ ಉನ್ನಿಕೃಷ್ಣ ಸಿ, ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದಶಿವಪ್ರಸಾದ್ ಬಿ.ಎನ್.ಕು.ಪ್ರೀತಿಕಾ ಎಂ.ಎಸ್.ರವರನ್ನು ಹಾಗೂ ರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಅವನಿ ಎಂ.ಎಸ್.ಮೋಂಟಡ್ಕರವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಯುವಕ ಮಂಡಲದ ಅಧ್ಯಕ್ಷ ದಿನೇಶ ಮೂಡೆಕಲ್ಲು,ಕೋಶಾಧಿಕಾರಿ ಚಿದಾನಂದ ಕೊಯಿಕುಳಿ, ಕುರಲ್ ತುಳುಕೂಟದ ಕೋಶಾಧಿಕಾರಿ ಮನೋಜ್ ಪಾನತ್ತಿಲ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಗಾಯತ್ರಿ ಪ್ರಾರ್ಥಿಸಿ, ಯುವಕ ಮಂಡಲದ ಪೂರ್ವಾಧ್ಯಕ್ಷರಾದ ಭವಾನಿಶಂಕರ ಕಲ್ಮಡ್ಕ ಸ್ವಾಗತಿಸಿದರು, ಶೇಖರ ಕುಪ್ಪಾಜೆ ವಂದಿಸಿ, ಕುರಲ್ ತುಳುಕೂಟದ ಕಾರ್ಯದರ್ಶಿ ನವ್ಯದಿನೇಶ್ ಕೊಯಿಕುಳಿ ಕಾರ್ಯಕ್ರಮ ನಿರೂಪಿಸಿದರು.
ಸಮರೋಪ ಕಾರ್ಯಕ್ರಮ ಮತ್ತು ವಿಜೇತರಿಗೆ ಬಹುಮಾನ ವಿತರಣೆ.
ಸಮಾರೋಪದ ಸಭಾಧ್ಯಕ್ಷತೆಯನ್ನು ಕುರಲ್ ತುಳುಕೂಟದ ಕಾರ್ಯದರ್ಶಿ ನವ್ಯದಿನೇಶ್ ಕೊಯಿಕುಳಿ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಸ್ಪರ್ಧಾ ವಿಜೇತರಿಗೆ ಕೊಯಿಕುಳಿ ಹಿ.ಪ್ರಾ.ಶಾಲಾ ಮುಖ್ಯ ಶಿಕ್ಷಕ ಮಾಧವ ಗೌಡ ಮೂಕಮಲೆ ಬಹುಮಾನ ವಿತರಿಸಿದರು.
ನ.ಪಂ.ಸದಸ್ಯ ಬಾಲಕೃಷ್ಣ ರೈ ದುಗ್ಗಲಡ್ಕ, ಸುಳ್ಯ ರೋಟರ್ಯಾಕ್ಟ್ ಅಧ್ಯಕ್ಷ ಪುವೇಂದ್ರನ್ ಕೂಟೇಲು ಅತಿಥಿಗಳಾಗಿ ಭಾಗವಹಿಸಿದ್ದರು.
ಕುರಲ್ ತುಳುಕೂಟದ ಸಂಚಾಲಕ ಡಾ|| ಕೆ.ಟಿ.ವಿಶ್ವನಾಥ ಕೊಯಿಕುಳಿ, ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಶಶಿಧರ ಎಂ.ಜೆ., ಮಾಜಿ ನ.ಪಂ.ಅಧ್ಯಕ್ಷೆ ಶೀಲಾವತಿ ಮಾಧವ, ದುಗ್ಗಲಡ್ಕ ಅಂಗನವಾಡಿ ಕಾರ್ಯಕರ್ತೆ ಚಿತ್ರ ಪ್ರಶಾಂತ್,ಯುವಕ ಬಹುಮಾನ ವಿತರಿಸಲಾಯಿತು.
ಮಂಡಲದ ಅಧ್ಯಕ್ಷ ದಿನೇಶ್ ಕೊಯಿಕುಳಿ ಹಾಗೂ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕುರಲ್ ತುಳುಕೂಟದ ಕೋಶಾಧಿಕಾರಿ ಮನೋಜ್ ಪಾನತ್ತಿಲ ಸ್ವಾಗತಿಸಿ, ಯುವಕ ಮಂಡಲದ ಪೂರ್ವಾಧ್ಯಕ್ಷ ಶೇಖರ ಕುಪ್ಪಾಜೆ ಬಹುಮಾನ ವಿಜೇತರ ಪಟ್ಟಿ ಓದಿದರು.
ಭವಾನಿಶಂಕರ ಕಲ್ಮಡ್ಕ ವಂದಿಸಿ, ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು.