ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸುಳ್ಯ ತಾಲೂಕು ಇವರ ಸಂಯುಕ್ತ ಆಶ್ರಯದಲ್ಲಿ ಸುಳ್ಯದ ದೇವರಾಜ ಅರಸು ಭವನ, ಅಮೈ, ಕೊಡಿಯಾಲಬೈಲ್ ಇಲ್ಲಿ ನಡೆದ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಡಿ.ದೇವರಾಜ ಅರಸುರವರ 107 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ತಹಶೀಲ್ದಾರ್ ಕು.ಅನಿತಾಲಕ್ಷ್ಮೀ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ.ಮಹದೇವ್, ಉಬರಡ್ಕ ಮಿತ್ತೂರು ಗ್ರಾ.ಪಂ.ಅಧ್ಯಕ್ಷೆ ಚಿತ್ರಾ ಕುಮಾರಿ ಹಾಗೂ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.