ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ದಿ. ಡಿ.ದೇವರಾಜ ಅರಸುರವರ 107ನೇ ಜನ್ಮದಿನೋತ್ಸವ ಮತ್ತು ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ಕೆ.ಪಿ.ಸಿ.ಸಿ ನಿರ್ದೇಶನದಂತೆ ಸುಳ್ಯದಲ್ಲಿ ನಡೆಯಲಿರುವ “ಸ್ವಾತಂತ್ರ್ಯ ನಡಿಗೆ” ಕಾರ್ಯಕ್ರಮದ ಪೂರ್ವಭಾವಿ ಸಭೆ ಇಂದು ಸುಳ್ಯದ ಅಡ್ಪಂಗಾಯ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ ರಾಜ್ಯ ಕಂಡ ಧೀಮಂತ ನಾಯಕ ಮಾಜಿ ಮುಖ್ಯಮಂತ್ರಿ ದಿ.ಡಿ ದೇವರಾಜ ಅರಸರು ಸಾಮಾಜಿಕ ಪರಿವರ್ತನೆಯ ಹರಿಕಾರ, ಸಮಾಜದಲ್ಲಿ ತುಳಿತಕ್ಕೊಲಗಾಗಿದ್ದ ಹಿಂದುಳಿದ ವರ್ಗಗಳ ಅಭಿವೃದ್ದಿಗೆ ಪಣತೊಟ್ಟು, ಬಡವರ ಬಾಳಿಗೆ ಹೊಸ ಸಾಮಾಜಿಕ ಚೈತನ್ಯವನ್ನು ನೀಡಿ ರಾಜ್ಯದ ಅಭಿವೃದ್ದಿಗೆ ಶ್ರಮಿಸಿದವರು. ರಾಜ್ಯದಲ್ಲಿ ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ಮಾತಿನಂತೆ ಬಡವರು, ಹಿಂದುಳಿದವರ ಏಳ್ಗೆಗೆ ಹಲವಾರು ಯೋಜನೆಗಳನ್ನು ರೂಪಿಸಿ ಸಾಮಾಜಿಕ ಸುಧಾರನೆ ಮಾಡಿದ್ದಾರೆ ಅವರ 107ನೇ ಜನ್ಮದಂದು ಅವರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.
ಕೆ.ಪಿ.ಸಿ.ಸಿ ನಿರ್ದೇಶನದಂತೆ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ರಾಜ್ಯದಾದ್ಯಂತ ಪಾದಯಾತ್ರೆ ನಡೆದಿದ್ದು ಬೆಂಗಳೂರಿನಲ್ಲಿ ಅಭೂತ ಪೂರ್ವ ಯಶಸ್ಸನ್ನು ಪಡೆದಿದೆ. ದ.ಕ ಜಿಲ್ಲೆಯಲ್ಲಿ ಮಳೆಯ ಕಾರಣದಿಂದ ಮುಂದೂಡಲಾಗಿದ್ದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮವನ್ನು ಆಗಸ್ಟ್ 30ರಂದು ಜಾಲ್ಸೂರಿನಿಂದ ಸುಳ್ಯದವರೆಗೆ ಸ್ವಾತಂತ್ರ್ಯ ನಡಿಗೆ ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮಕ್ಕೆ ತಾಲೂಕಿನ ಗ್ರಾಮ ಗ್ರಾಮಗಳಿಂದ ಕಾರ್ಯಕರ್ತರು ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವೀಗೊಳಿಸಬೇಕೆಂದು ಹೇಳಿದರು.
ಕೆ.ಪಿ.ಸಿ.ಸಿ ಮಾಜಿ ಕಾರ್ಯದರ್ಶಿ ಎಂ ವೆಂಕಪ್ಪ ಗೌಡ ಕಾರ್ಯಕ್ರಮದ ರೂಪುರೇಷೆಯ ಬಗ್ಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಕೆ.ಪಿ.ಸಿ.ಸಿ ಸಂಯೋಜಕ ಕೃಷ್ಣಪ್ಪ, ಬ್ಲಾಕ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ, ಮಾಜಿ ನಗರ ಪಂಚಾಯತ್ ಅಧ್ಯಕ್ಷ ಎಸ್ ಸಂಶುದ್ದೀನ್, ಕೆ.ಎಂ ಮುಸ್ತಪಾ, ಕೆ ಗೋಕುಲ್ ದಾಸ್, ಯುವ ಕಾಂಗ್ರೆಸ್ ಅಧ್ಯಕ್ಷ ಹಮೀದ್ ಕುತ್ತಮೊಟ್ಟೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೀತಾ ಕೋಲ್ಚಾರು, ಚಂದ್ರಲಿಂಗಂ, ತೇಜಕುಮಾರ್ ಬಡ್ಡಡ್ಕ, ಶ್ರೀಮತಿ ತಿರುಮಲೇಶ್ವರಿಅಡ್ಕಾರು ಉಪಸ್ಥಿತರಿದ್ದರು. ಸುಳ್ಯ ನಗರ, ಜಾಲ್ಸೂರು, ಅಜ್ಜಾವರ, ಆಲೆಟ್ಟಿ, ಮಂಡೆಕೋಲು, ಐವರ್ನಾಡು ಗ್ರಾಮಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು, ದಿನೇಶ್ ಅಂಬೆಕಲ್ಲು ಕಾರ್ಯಕ್ರಮ ನಿರೂಪಿಸಿದರು. ಸದಾನಂದ ಮಾವಜಿ ಸ್ವಾಗತಿಸಿ, ಗೋಕುಲ್ ದಾಸ್ ವಂದಿಸಿದರು.