Ad Widget

ಜಯನಗರ: ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ

ಜಯನಗರ ಕೊರಂಬಡ್ಕ ಶ್ರೀ ನಾಗಬ್ರಹ್ಮ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನ, ಶ್ರೀ ಗುಳಿಗ ದೈವ ಹಾಗೂ ಶ್ರೀ ಕೊರಗಜ್ಜನ ದೈವಸ್ಥಾನದ ವಠಾರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ನಡೆಯಿತು.

. . . . . . . . .

ಕಾರ್ಯಕ್ರಮವನ್ನು ಶ್ರೀ ನಾಗಬ್ರಹ್ಮ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನಗಳ ಗುಳಿಗ ದೈವ ಹಾಗೂ ಕೊರಗಜ್ಜ ದೈವಸ್ಥಾನ ಕೊರಂಬಡ್ಕ ಇದರ ಆಡಳಿತ ಸಮಿತಿ ಅಧ್ಯಕ್ಷ ಕೇಶವ ಸಿ.ಎ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

. . . . . . .

ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷ ಕೇಶವ ಸಿ.ಎ. ಯವರು ವಹಿಸಿದ್ದರು. ಮರ್ಕಂಜ ಅನ್ನಪೂರ್ಣೆಶ್ವರಿ ಕ್ಷೇತ್ರ ಯೋಗೀಶ್ವರ ಸಿದ್ಧ ಮಠದ ರಾಜೇಶ್ ನಾಥರವರು ಧಾರ್ಮಿಕ ಉಪನ್ಯಾಸ ನೀಡಿದರು.

ಕ್ಯಾಂಪ್ಕೋ ನಿರ್ದೇಶಕ ಕೃಷ್ಣಪ್ರಸಾದ್ ಮಡ್ತಿಲ, ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಿ.ಕೆ. ಉಮೇಶ್, ನಗರ ಪಂಚಾಯಿತಿ ನಾಮನಿರ್ದೇಶಿತ ಸದಸ್ಯ ರೋಹಿತ್ ಕೊಯಿಂಗೋಡಿ, ನಗರ ಪಂಚಾಯತ್ ಸದಸ್ಯೆ ಶ್ರೀಮತಿ ಶಿಲ್ಪಾ ಸುದೇವ್, ಶ್ರೀ ನಾಗಬ್ರಹ್ಮ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದ ಸಂಚಾಲಕ ಜಿ. ಜಗನ್ನಾಥ, ಜಯನಗರ ಶ್ರೀ ಗಜಾನನ ಭಜನಾ ಮಂದಿರದ ಅಧ್ಯಕ್ಷ ಮಾಧವ ಪಾಟಾಳಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ನಳಿನಿ, ಮಂಜು ಮೇಸ್ತ್ರಿ ಬಳ್ಳಾರಿಯವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಡುಗೆಯವರಾದ ಭವಾನಿಪ್ರಸಾದ್ ಜಯನಗರರವರನ್ನು ಸನ್ಮಾನಿಸಲಾಯಿತು.ಮಕ್ಕಳಿಗೆ ಮುದ್ದು ಕೃಷ್ಣವೇಷ ಸ್ಪರ್ಧೆ ಹಾಗೂ ಮಹಿಳೆಯರಿಗೆ, ಪುರುಷರಿಗೆ ವಿವಿಧ ಸ್ಪರ್ಧೆಗಳು ನಡೆಯಿತು. ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು. ಮೋಹನ್ ಹೊಸಗದ್ದೆ ಸ್ವಾಗತಿಸಿದರು. ಜನಾರ್ದನ ಜಯನಗರ ಕಾರ್ಯಕ್ರಮ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading