ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ (ರಿ.) ಸುಳ್ಯ, ಅರಣ್ಯ ಇಲಾಖೆ ಸುಳ್ಯ ಅಧಿಕಾರಿಗಳ ಮನೋರಂಜನಾ ಸಂಘ (ರಿ) ಸುಳ್ಯ ಇವರ ಸಹಯೋಗದಲ್ಲಿ ಸುಳ್ಯದ ಸ್ತ್ರೀಶಕ್ತಿ ಭವನದಲ್ಲಿ ಆ.24 ರಂದು ವನಮಹೋತ್ಸವ, ವಿಶ್ವ ಸ್ತನ್ಯಪಾನ ಸಪ್ತಾಹ, ಮಹಿಳೆಯರಿಗೆ ಪಶುಸಂಗೋಪನಾ ಇಲಾಖೆಯಿಂದ ಸಿಗುವ ವಿವಿಧ ಸವಲತ್ತುಗಳ ಕುರಿತು ಮಾಹಿತಿ ಹಾಗೂ ಬಿಬಿಬಿಪಿ ಯೋಜನೆಯಡಿ ಹೆಣ್ಣು ಮಕ್ಕಳಿಗೆ ಪ್ರೋತ್ಸಾಹಧನ ವಿತರಣೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಸುಳ್ಯದ ತಹಶೀಲ್ದಾರ ಕುಮಾರಿ ಅನಿತಾಲಕ್ಷ್ಮಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸುಳ್ಯ ಸ್ತ್ರೀಶಕ್ತಿ ಬ್ಲ್ಯಾಕ್ ಸೊಸೈಟಿ ಅಧ್ಯಕ್ಷೆ ಶ್ರೀಮತಿ ರಾಜೀವಿ ಎಲ್. ವಹಿಸಿದ್ದರು.
ಗೌರವ ಉಪಸ್ಥಿತರಾಗಿ ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ ಎನ್ , ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ| ನಂದಕುಮಾರ್ ಸಿ,
ಸುಳ್ಯ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ನಿತಿನ್ ಪ್ರಭು ಕೆ, ಉಪವಲಯ ಅರಣ್ಯಾಧಿಕಾರಿ ಯಶೋಧರ, ಜ್ಯೂನಿಯರ್ ಕಾಲೇಜು ಮುಖ್ಯ ಶಿಕ್ಷಕ ಪ್ರಕಾಶ್ ಮೂಡಿತ್ತಾಯ ಇದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಸುಳ್ಯ ಸಾರ್ವಜನಿಕ ಆಸ್ಪತ್ರೆಯ ಮಕ್ಕಳ ತಜ್ಞ ಡಾ| ರಜನಿ ಭಾಗವಹಿಸಿದ್ದರು.
ಸಿಡಿಪಿಯೋ ಶ್ರೀಮತಿ ರಶ್ಮಿ ಅಶೋಕ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ. ಶ್ರೀಮತಿ ರವಿಶ್ರೀ ವಂದಿಸಿ, ಹಿರಿಯ ಮೇಲ್ವಿಚಾರಕಿ ಶ್ರೀಮತಿ ಶೈಲಜಾ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಸ್ತ್ರೀ ಶಕ್ತಿ ಸದಸ್ಯರು ಹಾಗೂ ಅಂಗನವಾಡಿ ಕಾರ್ಯಕರ್ತರು ಭಾಗವಹಿಸಿದ್ದರು