ಕೆವಿಜಿ ಸಂದರ್ಶನದಲ್ಲಿ ಪಬ್ಲಿಕ್ ಸ್ಕೂಲ್ ನಲ್ಲಿ ಅ.22ರಂದು ಶಿಕ್ಷಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮಾಸಿಕ ಸಭೆ ನಡೆಯಿತು.
ಸಭೆಯಲ್ಲಿ ಐಪಿಎಸ್ ನ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಡಾ. ಉಜ್ವಲ್ ಯು. ಜೆ, ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕರ ಶ್ರಮವನ್ನು ಶ್ಲಾಘಿಸಿದರು ಜೊತೆಗೆ ಶಾಲಾ ಆಡಳಿತ ಮಂಡಳಿಯ ಸಂಚಾಲಕ ಡಾ. ರೇಣುಕಾಪ್ರಸಾದ್ ಕೆ. ವಿ ಇವರ ನಿರ್ದೇಶನದಂತೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗಾಗಿ ಹೆಚ್ಚಿನ ಪ್ರಗತಿಪರ ಚಟುವಟಿಕೆಗಳನ್ನು ಕೈಗೊಳ್ಳಲು ‘ಲ್ಯಾಪ್ ಟಾಪ್ ‘ ಕೊಡುಗೆಯನ್ನಾಗಿ ಶಾಲೆಗೆ ನೀಡಿದರು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಅರುಣ್ ಕುಮಾರ್ ರವರು ಶಾಲಾ ಅಭಿವೃದ್ಧಿಗೆ ಶಿಕ್ಷಕರ ಕೊಡುಗೆ ಮತ್ತು ಆಡಳಿತ ಮಂಡಳಿಯ ಸಹಕಾರವನ್ನು ಸ್ಮರಿಸಿ, ಧನ್ಯವಾದವನ್ನು ಸಲ್ಲಿಸಿದರು. ಈ ಸಭೆಯಲ್ಲಿ ಉಪಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.