Ad Widget

ಯೇನೆಕಲ್ಲು :- ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ನೂತನ ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ.) ಪಂಜ-ಸುಬ್ರಹ್ಮಣ್ಯ ವಲಯದ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಯೇನೆಕಲ್ಲು, ಯೇನೆಕಲ್ಲು ಬಿ, ಸುಬ್ರಹ್ಮಣ್ಯ, ದೇವರಹಳ್ಳಿ-ಕಲ್ಲಾಜೆ, ಕುಲ್ಕುಂದ ಒಕ್ಕೂಟಗಳ ಸಹಯೋಗದೊಂದಿಗೆ ಆ.25 ರಂದು ಶ್ರೀ ಆದಿಶಕ್ತಿ ಭಜನಾ ಮಂದಿರ ಬಾಲಾಡಿ-ಯೇನೆಕಲ್ಲು ಇಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ ಹಾಗೂ ನೂತನ ಒಕ್ಕೂಟಗಳ ಪದಗ್ರಹಣ ಸಮಾರಂಭ ನಡೆಯಿತು.

. . . . . . . . .

ಆದಿಶಕ್ತಿ ಭಜನಾ ಮಂದಿರ ಬಾಲಾಡಿ-ಯೇನೆಕಲ್ಲು ಇದರ ಅಧ್ಯಕ್ಷರಾದ ಗಿರಿಯಪ್ಪ ಗೌಡ ಬಾಲಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಲಲಿತಾ ಗುಂಡಡ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

. . . . . . .

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ಅವರು ಜವಬ್ದಾರಿ ಹಸ್ತಾಂತರ ಮಾಡಿದರು. ಮುಖ್ಯ ಅತಿಥಿಗಳಾಗಿ ಸುಳ್ಯ ತಾಲೂಕು ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ವಿಮಲಾ ರಂಗಯ್ಯ, ಯೇನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಭವಾನಿಶಂಕರ ಪೂಂಬಾಡಿ, ಸುಳ್ಯ ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ಅಶೋಕ್ ನೆಕ್ರಾಜೆ, ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಮತ್ತು ಉಳ್ಳಾಕುಲು-ಉಳ್ಳಾಲ್ತಿ ಶ್ರೀ ಬಚ್ಚನಾಯಕ ದೈವಸ್ಥಾನ ಯೇನೆಕಲ್ಲು ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ನಾಗೇಶ್ ನೆಕ್ರಾಜೆ ಇವರುಗಳು ಉಪಸ್ಥಿತರಿದ್ದರು. ಪಂಜ ಎಫ್.ಎಸ್ ಪ್ರಿಯಾ ಸ್ವಾಗತಿಸಿ ಯೇನೆಕಲ್ಲು ಸೇವಾಪ್ರತಿನಿಧಿ ತಾರಾ ಧನ್ಯವಾದ ಸಮರ್ಪಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ರಾಜೇಶ್.ಕೆ ಹಾಗೂ ಹರಿಶ್ಚಂದ್ರ ಕಾರ್ಯಕ್ರಮ ನಿರೂಪಿಸಿದರು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಂಜ-ಸುಬ್ರಹ್ಮಣ್ಯ ವಲಯಗಳ ಸೇವಾಪ್ರತಿನಿಧಿಗಳು ಹಾಗೂ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಯೇನೆಕಲ್ಲು, ಯೇನೆಕಲ್ಲು ಬಿ, ಸುಬ್ರಹ್ಮಣ್ಯ, ದೇವರಹಳ್ಳಿ-ಕಲ್ಲಾಜೆ, ಕುಲ್ಕುಂದ ಒಕ್ಕೂಟಗಳ ಅಧ್ಯಕ್ಷರು, ಪದಾಧಿಕಾರಿಗಳು, ಸರ್ವಸದಸ್ಯರುಗಳು ಉಪಸ್ಥಿತರಿದ್ದರು.

ವರದಿ :- ಉಲ್ಲಾಸ್ ಕಜ್ಜೋಡಿ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading