Ad Widget

ಅರಂತೋಡು ಸುಳ್ಯ ತಾಲ್ಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾಟ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಸಹಯೋಗದಲ್ಲಿ ಸುಳ್ಯ ತಾಲ್ಲೂಕು ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾ ಕೂಟ ಅರಂತೋಡು ಪ್ರಾಥಮಿಕ ಶಾಲಾ ವಠಾರದಲ್ಲಿ ಆ..27ರಂದು ನಡೆಯಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುರೇಶ್ ಯು.ಕೆ ವಹಿಸಿದರು. ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ ದೇರಾಜೆ ಕಾರ್ಯಕ್ರಮ ವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು ..ವೇದಿಕೆಯಲ್ಲಿ ಅರಂತೋಡು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಕು.ಶ್ವೇತಾ ಅರಮನೆಗಾಯ, ಸುಳ್ಯ ಶಿಕ್ಷಣ ಪರಿವೀಕ್ಷಣಾಧಿಕಾರಿ ಸೂಪಿ ಪೆರಾಜೆ,ಸುಳ್ಯ ತಾಲ್ಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ,ಅರಂತೋಡು ಗ್ರಾಮ ಪಂಚಾಯತ್ ಸದಸ್ಯರಾದ ಶಿವಾನಂದ ಕುಕ್ಕುಂಬಳ, ಮಾಲಿನಿ ಉಳುವಾರು ಪುಷ್ಪಾಧರ ಕೊಡಂಕೇರಿ ,ಸರಕಾರಿ ನೌಕರ ಸಂಘದ ನಿರ್ದೇಶಕಿ ಎ.ಜಿ.ಭವಾನಿ , ಅರಂತೋಡು ಸಮೂಹ ಸಂಪನ್ಮೂಲ ವ್ಯಕ್ತಿ ಮಹೇಶ ,ನಿವೃತ್ತ ಸೈನಿಕರಾದ ಹರಿಶ್ಚಂದ್ರ ಅಳಿಕೆ,ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೆಶನ್ ಕಾರ್ಯದರ್ಶಿ ಫಸಿಲು, ಅರಂತೋಡು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ಬನ, ದೈಹಿಕ ಶಿಕ್ಷಕಿ ಸರಸ್ವತಿ ಕೆ , ಪ್ರಾಥಮಿಕ ಶಾಲಾ ಶಿಕ್ಷಣ ಸಮಿತಿ ಸಂಘದ ಕಾರ್ಯದರ್ಶಿ ಶೀಲಾವತಿ ಕೆ.ಎನ್, ಉಪಸ್ಥಿತರಿದ್ದರು.ಶಾಲಾ ಎಸ್ ಡಿ ಎಮ್ ಸಿ ಸಮಿತಿಯವರು ವಿಧ್ಯಾರ್ಥಿಗಳ ಪೋಷಕರು ಸಹಕರಿಸಿದರು. ಗೋಪಾಲಕೃಷ್ಣ ಸ್ವಾಗತಿಸಿ ಶಿಕ್ಷಕಿ ಸರಸ್ವತಿ ವಂದಿಸಿ ಶಿಕ್ಷಕಿ ರೇಷ್ಮಾ ಜೆ.ಇ.ಕಾರ್ಯಕ್ರಮ ನಿರೂಪಿಸಿದರು .

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading