Ad Widget

ಗುತ್ತಿಗಾರು :- ಆ.30 ರಂದು ಅಭಿನಂದನಾ ಕಾರ್ಯಕ್ರಮ ಮತ್ತು ಪುಸ್ತಕ ಪ್ರದರ್ಶನ

. . . . . . . . .

ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ವತಿಯಿಂದ ಆ.12 ರಂದು ಪಿತಾಮಹ ಡಾ.ಎಸ್.ಆರ್.ರಂಗನಾಥನ್ ರವರ ಜನ್ಮದಿನೋತ್ಸವದ ಅಂಗವಾಗಿ ನಡೆದ ಸ್ಪರ್ಧಾ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ ಮತ್ತು ಪುಸ್ತಕ ಪ್ರದರ್ಶನ ಕಾರ್ಯಕ್ರಮ ಆ.30 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಸಭಾಭವನದಲ್ಲಿ ನಡೆಯಲಿದೆ.
ನಿವೃತ್ತ ಶಿಕ್ಷಕರಾದ ಕುಶಾಲಪ್ಪ ಗೌಡ ರುದ್ರಚಾಮುಂಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು, ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೇವತಿ ಆಚಳ್ಳಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸುಳ್ಯ ತಾಲೂಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಚಂದ್ರಶೇಖರ ಪೇರಾಲು ಅವರು ಅಭಿನಂದನಾ ಪತ್ರ ವಿತರಿಸಲಿದ್ದಾರೆ.
ಜಿ.ಕೆ.ಗ್ರಾ ಮಂಗಳೂರು ಇದರ ಮುಖ್ಯ ಗ್ರಂಥಾಲಯಾಧಿಕಾರಿಗಳಾದ ಶ್ರೀಮತಿ ಗಾಯತ್ರಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ.ಎನ್ ಗುತ್ತಿಗಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ ಇವರುಗಳು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಇರಲಿದ್ದಾರೆ.
ಈ ಸಂದರ್ಭದಲ್ಲಿ ಸ್ಪರ್ಧಾ ಕಾರ್ಯಕ್ರಮದ ನಿರ್ದೇಶಕರಾದ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯದ ಸದಸ್ಯರಾದ ಯೋಗೀಶ್ ಹೊಸೋಳಿಕೆ ಹಾಗೂ ಗ್ರಾಮ ಪಂಚಾಯತ್ ಗ್ರಂಥಾಲಯ ಗುತ್ತಿಗಾರು ಇದರ ಮೇಲ್ವಿಚಾರಕರಾದ ಶ್ರೀಮತಿ ಅಭಿಲಾಷಾ ಮೋಟ್ನೂರು ಉಪಸ್ಥಿತರಿರಲಿದ್ದಾರೆ.

. . . . . . .

ವರದಿ :- ಉಲ್ಲಾಸ್ ಕಜ್ಜೋಡಿ


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading