ಸುಳ್ಯ: ಶಾರದಾ ಹೆಣ್ಣುಮಕ್ಕಳ ಪ್ರೌಢಶಾಲೆಯಲ್ಲಿ ಸೆ. 6 ರಂದು ಕನ್ನಡದ ಕುಲಪುರೋಹಿತರಾದ ಆಲೂರು ವೆಂಕಟರಾವ್ ಭಾಷಾ ಕೌಶಲ್ಯ ತರಬೇತಿ ಕೇಂದ್ರದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯದ ಸಹಯೋಗದಲ್ಲಿ ‘ಕನ್ನಡಸಂಭ್ರಮಾಚರಣೆ’ಯಲ್ಲಿ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆ ನಡೆಯಿತು.ಸ್ಪರ್ಧೆಯ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಗೌಡ ವಿದ್ಯಾ ಸಂಘದ ಸುಳ್ಯ ಅಧ್ಯಕ್ಷ ಧನಂಜಯ ಅಡಂಗಾಯರವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿಗಳಾದ ಶ್ರೀಮತಿ ಶೀತಲ್ ಯು ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಶಿಕ್ಷಣ ಸಂಯೋಜಕರಾದ ಶ್ರೀಮತಿ ನಳಿನಿ, ಸುಳ್ಯ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಮಮತಾ.ಕೆ., ಶ್ರೀ ಶಾರದಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ದಯಾಮಣಿ ಕೆ. ಹಾಗೂ ಶ್ರೀ ಶಾರದ ಹೆಣ್ಣು ಮಕ್ಕಳ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಭಾರತಿ ಉಪಸ್ಥಿತರಿದ್ದರು.ರಸಪ್ರಶ್ನೆ ಕಾರ್ಯಕ್ರಮವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಲ್ಚಾರ್ ನ ಸಹ ಶಿಕ್ಷಕರಾದ ಶ್ರೀಮತಿ ಜಲಜಕ್ಷಿ ಇವರು ನಡೆಸಿಕೊಟ್ಟರು. ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಸ್ನೇಹ ಶಿಕ್ಷಣ ಸಂಸ್ಥೆ ಸುಳ್ಯದ ಸಂದೇಶ ಕೆ , ದ್ವಿತೀಯ ಸ್ಥಾನವನ್ನು ಕುಮಾರಸ್ವಾಮಿ ವಿದ್ಯಾಲಯ ಸುಬ್ರಹ್ಮಣ್ಯದ ಪ್ರಸೂನ್ ಎಂ ಪಾಟೀಲ್, ತೃತೀಯ ಸ್ಥಾನವನ್ನು ಕೆಪಿಎಸ್ ಬೆಳ್ಳಾರೆ ನಿಸ್ವನ ಪಡೆದುಕೊಂಡು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಮುಖ್ಯೋಪಾಧ್ಯಾಯರಾದ ಶ್ರೀಮತಿ ಭಾರತಿ ಪಿ. ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಪ್ರಭಾವತಿ ಎಸ್. ವಂದಿಸಿದರು. ಕನ್ನಡ ಶಿಕ್ಷಕಿ ಶ್ರೀಮತಿ ಗಾಯತ್ರಿ ಸಿ.ಎನ್. ಕಾರ್ಯಕ್ರಮವನ್ನು ನಿರೂಪಿಸಿದರು.
- Friday
- November 1st, 2024