3ನೇ ವರ್ಷದ ಯಕ್ಷಗಾನ ನಾಟ್ಯ ತರಗತಿ ಆರಂಭ
ದುಗ್ಗಲಡ್ಕದ ಶ್ರೀ ದುಗ್ಗಲಾಯ ಮಕ್ಕಳ ಯಕ್ಷಗಾನ ಕಲಾ ಸಂಘದ ವಾರ್ಷಿಕ ಮಹಾಸಭೆ ಮತ್ತು 3 ನೇ ವರ್ಷದ ಯಕ್ಷಗಾನ ನಾಟ್ಯ ತರಗತಿ ದುಗ್ಗಲಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಸೆ.11ರಂದು ಆರಂಭಗೊಂಡಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಲಾ ಸಂಘದ ಸಂಚಾಲಕ, ಯಕ್ಷಗಾನ ನಾಟ್ಯಗುರು ಬಾಲಕೃಷ್ಣ ನಾಯರ್ ನೀರಬಿದಿರೆ ವಹಿಸಿದ್ದರು. ದುಗ್ಗಲಡ್ಕದ ಮಿತ್ರ ಯುವಕ ಮಂಡಲದ ಅಧ್ಯಕ್ಷ ದಿನೇಶ್ ಕೊಯಿಕುಳಿ ಉದ್ಘಾಟಿಸಿದರು.
ಕಲಾ ಸಂಘದ ಅಧ್ಯಕ್ಷ ಯತೀಶ್ ರೈ ದುಗ್ಗಲಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಮುಖ್ಯ ಅತಿಥಿಗಳಾಗಿ ನಗರ ಪಂಚಾಯತ್ ಸದಸ್ಯೆ ಶ್ರೀಮತಿ ಶಶಿಕಲಾ ನೀರಬಿದಿರೆ, ದುಗ್ಗಲಾಯ ದೈವಸ್ಥಾನ ಸಮಿತಿ ಗೌರವಾಧ್ಯಕ್ಷ ದಯಾನಂದ ಸಾಲಿಯಾನ್ ಮೂಡೆಕಲ್ಲು, ಹಿರಿಯ ಯಕ್ಷಗಾನ ಕಲಾವಿದ ರಾಮಚಂದ್ರ ನಾಯ್ಕ ಕುಂಬೆತ್ತಿಬನ, ಮಾಜಿ ನ.ಪಂ.ಅಧ್ಯಕ್ಷೆ ಶ್ರೀಮತಿ ಶೀಲಾವತಿ ಮಾಧವ ಭಾಗವಹಿಸಿದ್ದರು.
ಶಿಕ್ಷಕಿ ಶ್ರೀಮತಿ ಶೈಲಜಾ ಸ್ವಾಗತಿಸಿ, ಕಾರ್ಯದರ್ಶಿ ಶ್ರೀಮತಿ ಗಾಯತ್ರಿ ವಂದಿಸಿದರು. ಯತೀಶ್ ರೈ ಕಾರ್ಯಕ್ರಮ ನಿರೂಪಿಸಿದರು.
ಯಕ್ಷಗಾನ ನಾಟ್ಯ ತರಗತಿ ಪ್ರತೀ ಆದಿತ್ಯವಾರ ದುಗ್ಗಲಡ್ಕಪ್ರೌಢಶಾಲೆಯಲ್ಲಿ ನಡೆಯಲಿದ್ದು, ಆಸಕ್ತರು ತರಗತಿಗೆಸೇರಬಹುದೆಂದು ಸಂಘಟಕರು ತಿಳಿಸಿದ್ದಾರೆ.