ಸುಳ್ಯ ತಾಲೂಕು ತಹಶೀಲ್ದಾರ್ ಅನಿತಾಲಕ್ಷ್ಮಿ ಅವರ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಗ್ರಾಮ ವಾಸ್ತವ್ಯ ಸೆ.17 ರಂದು ಸುಳ್ಯ ತಾಲೂಕಿನ ಹರಿಹರ ಪಲ್ಲತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಲಿದೆ. ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು ಎಂದು ಪ್ರಕಟಣೆ ತಿಳಿಸಿದೆ.
ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಹರಿಹರ ಪಲ್ಲತ್ತಡ್ಕ ಗ್ರಾಮದ ಎಲ್ಲಾ ಸಾರ್ವಜನಿಕರು ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ತಿಳಿಸಲಾಗಿದೆ.
ವರದಿ :- ಉಲ್ಲಾಸ್ ಕಜ್ಜೋಡಿ