Ad Widget

ಬೆಳ್ಳಾರೆ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಬೆಳ್ಳಾರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸೆ.20 ರಂದು ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.

. . . . . .

ಸಂಘದ ಅಧ್ಯಕ್ಷ ಅನಿಲ್ ರೈ ಚಾವಡಿಬಾಗಿಲುರವರ ಅಧ್ಯಕ್ಷತೆವಹಿಸಿದರು. ಅವರು ಸಭೆಯಲ್ಲಿ ಭಾಗವಹಿಸಿದವರನ್ನು ಸ್ವಾಗತಿಸಿ ಮಾತನಾಡಿದರು. ಸಂಘವು 224.9 ಕೋಟಿ ವಾರ್ಷಿಕ ವ್ಯವಹಾರ ನಡೆಸಿ ರೂ.48.46 ಲಕ್ಷ ಲಾಭಗಳಿಸಿದೆ. ಸದಸ್ಯರಿಗೆ ಶೇ.8 ಡಿವಿಡೆಂಟ್ ನೀಡಲಾಗುವುದು ಎಂದು ಹೇಳಿ ಸಂಘದ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಜಯ ರೈ ವಾರ್ಷಿಕ ವರದಿ ಮಂಡಿಸಿದರು.
ಈ ಸಂದರ್ಭದಲ್ಲಿ ದಯಾಕರ ಆಳ್ವ, ಸಚಿನ್ ರಾಜ್ ಶೆಟ್ಟಿ, ಐತ್ತಪ್ಪ ರೈ ಅಜ್ರಂಗಳ, ಹರ್ಷನ್ ಕೆ.ಟಿ, ಶಿವರಾಮ ನಾಯಕ್, ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ ಸುಬ್ರಹ್ಮಣ್ಯ ಭಟ್,ಜೈನುದ್ದೀನ್, ಈಶ್ವರ ಆಳ್ವ, ಆರ್.ಕೆ.ಭಟ್ ಕುರುಂಬುಡೇಲು, ರಾಜೀವಿ ಆರ್ .ರೈ, ಮತ್ತಿತರರು ವರದಿ ಬಗ್ಗೆ ಹಾಗೂ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾತನಾಡಿದರು. ನಂತರ ಎಸ್.ಎಸ್.ಎಲ್.ಸಿ ಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಅಬ್ದುಲ್ ರಹಿಮಾನ್, ಡಿ.ಸಿ.ಸಿ.ಬ್ಯಾಂಕ್ ಮೇಲ್ವಿಚಾರಕ ಬಾಲಕೃಷ್ಣ ಪುತ್ಯ, ನಿರ್ದೇಶಕರಾದ ಕರುಣಾಕರ ಆಳ್ವ, ರಮೇಶ ಮಾರ್ಲ, ಶ್ರೀರಾಮ ಪಾಟಾಜೆ, ವಿಠಲದಾಸ್ ಎನ್.ಎಸ್.ಡಿ ಉಪಸ್ಥಿತರಿದ್ದರು.
ಸಂಘದ ಸಿಬ್ಬಂದಿ ಶ್ರೀಮತಿ ಸುನಂದ ಆಳ್ವರವರು ವಂದಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!