ಜ್ಞಾನಧಾಮ ಚಾರಿಟೇಬಲ್ ಟ್ರಸ್ಟ್(ರಿ), ಮದುವೆಗದ್ದೆ, ಉಬರಡ್ಕ ಮಿತ್ತೂರು ಹಾಗೂ ಊರವರ ಮತ್ತು ದಾನಿಗಳ ಸಹಕಾರದೊಂದಿಗೆ ಉಬರಡ್ಕ ಮಿತ್ತೂರು ಗ್ರಾಮದ ಅಮೈ ಮಡಿಯಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿದ ಸ್ವಾತಂತ್ರ್ಯ ಸೇನಾನಿ ಕೆದಂಬಾಡಿ ರಾಮಯ್ಯ ಗೌಡರ ಸ್ಮಾರಕ ದ್ವಾರ ಮತ್ತು ಭಾರತದ ಸ್ವಾತಂತ್ರ್ಯ ಸಂಗ್ರಾಮ 1837ರ ಅಮರ ಸೈನ್ಯದ ಚಾರಿತ್ರಿಕ ಉಬ್ಬುಶಿಲ್ಪಗಳ ಲೋಕಾರ್ಪಣೆ ಸಮಾರಂಭದಲ್ಲಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಭಾಗವಹಿಸಿದರು.
ಕಾರ್ಯಕ್ರಮದಲ್ಲಿ ಆಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಸುಳ್ಯ ಇದರ ಅಧ್ಯಕ್ಷರಾದ ಡಾ|ಕೆ.ವಿ.ಚಿದಾನಂದ, ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷರಾದ ಡಾ|ರೇಣುಕಾ ಪ್ರಸಾದ್,ಕೆ.ವಿ. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಪ್ರಾಂಶುಪಾಲರಾದ ಕೆ.ಆರ್.ಗಂಗಾಧರ್, ಉಬರಡ್ಕ ಮಿತ್ತೂರು ಗ್ರಾ.ಪಂ. ಅಧ್ಯಕ್ಷೆ ಚಿತ್ರ ಕುಮಾರಿ ಪಾಲಡ್ಕ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ, ಸಾಂದೀಪನಿ ವಿಶೇಷ ಶಾಲೆಯ ಮುಖ್ಯಸ್ಥರಾದ ಎಂ.ಬಿ.ಸದಾಶಿವ, ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸಂಘದ ಅಧ್ಯಕ್ಷರಾದ ಪಿ.ಸಿ.ಜಯರಾಮ ರೈ, ಪುತ್ತೂರು ಜೇನು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷರಾದ ಚಂದ್ರ ಕೋಲ್ಚಾರು, ಇತಿಹಾಸ ಸಂಶೋಧಕರಾದ ವಿದ್ಯಾಧರ ಕುಡೆಕಲ್ಲು, ಕೆದಂಬಾಡಿ ರಾಮಯ್ಯ ಗೌಡ ಸ್ಮಾರಕ ಉಸ್ತುವಾರಿ ಸಮಿತಿಯ ಅಧ್ಯಕ್ಷರಾದ ಕಿರಣ್ ಬುಡ್ಲೆಗುತ್ತು, ಸಾಹಿತಿ ಎ.ಕೆ.ಹಿಮಕರ, ಪ್ರಮುಖರಾದ ರವಿವರ್ಮ ರೈ, ಜ್ಞಾನಧಾಮ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷರಾದ ದಾಮೋಧರ ಗೌಡ ಮದುವೆಗದ್ದೆ, ಉ.ಮಿತ್ತೂರು ನರಸಿಂಹ ಶಾಸ್ತಾವು ದೇವಾಲಯದ ಅಧ್ಯಕ್ಷರಾದ ರತ್ನಾಕರ ಗೌಡ ಬಳ್ಳಡ್ಕ, ಮಿತ್ತೂರು ಜೋಡು ದೈವಗಳ ಮೊಕ್ತೇಸರರಾದ ವೆಂಕಟರಮಣ ಗೌಡ ಕೆದಂಬಾಡಿ, ಕೆದಂಬಾಡಿ ವೆಲ್ಫೇರ್ ಸೊಸೈಟಿ ಚೆಟ್ಟಿಮಾನಿ ಅಧ್ಯಕ್ಷರಾದ ಕೆದಂಬಾಡಿ ಜಯಪ್ರಕಾಶ, ಅಮೈ ಮಡಿಯಾರು ಶಾಲೆಯ ಅಧ್ಯಕ್ಷರಾದ ಓಂ ಪ್ರಕಾಶ್ ನಾರ್ಕೋಡು, ಉ.ಮಿತ್ತೂರು ಗ್ರಾ.ಪಂ. ಉಪಾಧ್ಯಕ್ಷ ಪ್ರಶಾಂತ ಪಾನತ್ತಿಲ, ಉ.ಮಿತ್ತೂರು ಪ್ರಾ.ಕೃ.ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ರಾಜೇಶ್ ಭಟ್ ನೆಕ್ಕಿಲ, ಗ್ರಾ.ಪಂ.ಸದಸ್ಯರಾದ ಹರೀಶ್ ರೈ ಉಬರಡ್ಕ, ಸಂದೀಪ್ ಕುತ್ತಮೊಟ್ಟೆ, ಶ್ರೀಮತಿ ಮಮತಾ ಕುದ್ಪಾಜೆ, ಶಾಲೆಯ ಮುಖ್ಯೋಪಾಧ್ಯಾಯರಾದ ಪದ್ಮನಾಭ ಅತ್ಯಾಡಿ ಹಾಗೂ ಕೆದಂಬಾಡಿ ಕುಟುಂಬಸ್ಥರು, ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ,1837ರ ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ಅಮರ ಸುಳ್ಯ ಸೈನ್ಯದಲ್ಲಿ ಭಾಗವಹಿಸಿ ಹುತಾತ್ಮರಾದವರ ನೆನಪಿಗೆ ಉಬರಡ್ಕ ಮಿತ್ತೂರು ಗ್ರಾಮದಲ್ಲಿ ನೆಲೆಸಿರುವ ಕುಟುಂಬದ ಹಿರಿಯ ಸದಸ್ಯರಿಗೆ ಗೌರವಾರ್ಪಣೆ ನಡೆಯಿತು.
- Thursday
- November 21st, 2024