ಕುಕ್ಕೆ ಶ್ರೀ ಸುಬ್ರಮಣೇಶ್ವರ ಮಹಾವಿದ್ಯಾಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ಜನಪರ ಉತ್ಸವವ ಕಾರ್ಯಕ್ರಮ ಸೆ. 27ರಂದು ನಡೆಯಿತು.
ಕಾರ್ಯಕ್ರಮವನ್ನು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲಲಿತಾ ಗುಂಡಡ್ಕ ಉದ್ಘಾಟಿಸಿದರು.
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ ಅಧ್ಯಕ್ಷತೆ ವಹಿಸಿದ್ದರು.
ಕೆ ಎಸ್ ಎಸ್ ಕಾಲೇಜು ಸುಬ್ರಮಣ್ಯನ ಪ್ರಾಂಶುಪಾಲ ಡಾ. ದಿನೇಶ್ ಪಿ. ಟಿ. ಮುಖ್ಯ ಅತಿಥಿಗಳಾಗಿದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆಯ ಸಹಾಯಕ ನಿರ್ದೇಶಕರಾದ ಶ ರಾಜೇಶ್ ಜಿ. ವಂದಿಸಿ, ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಪ್ರಸಾದ ಎನ್. ಕಾರ್ಯಕ್ರಮ ಆಯೋಜಿಸಿದರು. ಉಪನ್ಯಾಸಕಿ ಆರತಿ ಕೆ ಕಾರ್ಯಕ್ರಮ ನಿರೂಪಿಸಿದರು.
ಬೈಯನಹಳ್ಳಿ, ಚೆನ್ನಗಿರಿ, ಭದ್ರಾವತಿ ಮೊದಲಾದ ಕಡೆಗಳಿಂದ ಕಲಾವಿದರು ಆಗಮಿಸಿ ಡೊಳ್ಳು ಕುಣಿತ, ಕಂಸಾಳೆ, ಲಂಬಾಣಿ ನೃತ್ಯ ಮೊದಲಾದ ಕಲಾ ಪ್ರಕಾರಗಳನ್ನು ಪ್ರದರ್ಶಿಸಿದರು.