ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕರ್ನಾಟಕ ಬೆಟಾಲಿಯನ್ ಎನ್ ಸಿ ಸಿ ಮಡಿಕೇರಿ ಆಶ್ರಯದಲ್ಲಿ ನಡೆಯುತ್ತಿರುವ Pre RDC II ಮತ್ತು CATC ಶಿಬಿರದ ನಾಲ್ಕನೇ ದಿನ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಮಾಹಿತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜಿನ ಕಮ್ಯೂನಿಟಿ ಮೆಡಿಷಿನ್ ವಿಭಾಗದ ಅಸೋಸಿಯೇಟ್ ಪ್ರೊಫೆಸರ್ ಡಾ. ದಿಲೀಪ್ ಶ್ರೀನಿವಾಸ್ ಮಾಹಿತಿ ನೀಡುತ್ತಾ, ಮನುಷ್ಯ ಮಾನಸಿಕವಾಗಿ, ದೈಹಿಕವಾಗಿ, ಸಾಮಾಜಿಕವಾಗಿ ಸ್ವಸ್ಥವಾಗಿದ್ದಾಗ ಮಾತ್ರ ಆರೋಗ್ಯವಂತ ವ್ಯಕ್ತಿ ಎಂದು ಕರೆಸಿಕೊಳ್ಳಲು ಸಾಧ್ಯ.
ಮನುಷ್ಯ ಈ ಎಲ್ಲ ರೀತಿಯ ಆರೋಗ್ಯವಾಗಿರಲು ವ್ಯಾಯಾಮ ಹಾಗೂ ಒಳ್ಳೆಯ ವಿಚಾರಗಳ ಕಡೆ ಗಮನ ಕೊಡುತ್ತಾ ತನ್ನ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಬೇರೆಯವರ ಆರೋಗ್ಯವನ್ನು ಕಾಪಾಡುವಲ್ಲಿ ಪ್ರತಿಯೊಬ್ಬರ ಪಾತ್ರವು ಬಹಳ ಮುಖ್ಯವಾದದ್ದು ಎಂದರು.