ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯದ 12 ಒಕ್ಕೂಟಗಳ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮವು ಅ.19ರಂದು ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ಕಲಾಮಂದಿರದಲ್ಲಿ ನಡೆಯಿತು. ದಕ್ಷಿಣ ಕನ್ನಡ 02 ಜಿಲ್ಲಾ ನಿರ್ದೇಶಕರಾದ ಪ್ರವೀಣ್ ಕುಮಾರ್ ಅವರು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿಗಳಾದ ನಾಗೇಶ್.ಪಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ಮೇಲ್ವಿಚಾರಕರಾದ ರಾಜೇಶ್.ಕೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯದ ಅಧ್ಯಕ್ಷರಾದ ತೀರ್ಥರಾಮ ದೋಣಿಪಳ್ಳ, ಸುಳ್ಯ ತಾಲೂಕು ಆಡಿಟರ್ ಉಮೇಶ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಭಾರತಿ.ಕೆ, ಸುಬ್ರಹ್ಮಣ್ಯ ವಲಯದ ಎಲ್ಲಾ ಒಕ್ಕೂಟಗಳ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.
ತರಬೇತಿ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ವಲಯದ 12 ಒಕ್ಕೂಟಗಳ ಪದಾಧಿಕಾರಿಗಳಿಗೆ ಪ್ರಗತಿನಿಧಿ ಭದ್ರತೆ ಬಗ್ಗೆ, ಯೋಜನೆಯ ಕಾರ್ಯಕ್ರಮಗಳು, ಮೈಕ್ರೋಬಜತ್, ಸೋಲಾರ್, ಭೀಮಜ್ಯೋತಿ ಪಾಲಿಸಿ, ಪ್ರಗತಿರಕ್ಷಾ, ಸಿಡ್ಬಿ ಬಗ್ಗೆ ಯೋಜನಾಧಿಕಾರಿಗಳಾದ ನಾಗೇಶ್.ಪಿ ಅವರು ತರಬೇತಿ ನೀಡಿದರು.
ಸೇವಾಪ್ರತಿನಿಧಿಗಳಾದ ನಾಗವೇಣಿ ಸ್ವಾಗತಿಸಿ ರೇಖಾ ಧನ್ಯವಾದ ಸಮರ್ಪಿಸಿದರು. ವಲಯ ಮೇಲ್ವಿಚಾರಕರಾದ ರಾಜೇಶ್.ಕೆ ಕಾರ್ಯಕ್ರಮ ನಿರೂಪಿಸಿದರು.
ವರದಿ :- ಉಲ್ಲಾಸ್ ಕಜ್ಜೋಡಿ