ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಎನ್ ಸಿ ಸಿ ವತಿಯಿಂದ ಕೆವಿಜಿ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ ಸುಳ್ಯ ಇಲ್ಲಿನ “ವೈದ್ಯ ವಿದ್ಯಾರ್ಥಿಗಳಿಗೆ ಸೈನ್ಯದಲ್ಲಿ ಅವಕಾಶಗಳು ಕುರಿತು ಮಾಹಿತಿ ಕಾರ್ಯಕ್ರಮ” ನಡೆಯಿತು. 19 ಕರ್ನಾಟಕ ಬೆಟಾಲಿಯನ್ ಎನ್ ಸಿ ಸಿ ಮಡಿಕೇರಿ ಯ ಆಡಳಿತ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಚಾಕೋ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವೈದ್ಯಕೀಯ ವಿದ್ಯಾರ್ಥಿಗಳಿಗೆ ಭೂದಳ, ವಾಯುದಳ ಮತ್ತು ನೌಕಾದಳದಲ್ಲಿ ಇರುವ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮಾತನಾಡಿ “ಸೈನ್ಯದಲ್ಲಿ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ದೇಶ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಿ ಎಂದರು. ನೆಹರೂ ಮೆಮೋರಿಯಲ್ ಕಾಲೇಜಿನ ಎನ್ ಸಿ ಸಿ ಅಧಿಕಾರಿ ಲೆ. ಸೀತಾರಾಮ ಎಂ ಡಿ ಉಪಸ್ಥಿತರಿದ್ದರು.