ಕೊಲ್ಲಮೊಗ್ರು ಗ್ರಾಮ ಪಂಚಾಯತು ಸಭಾಂಗಣದಲ್ಲಿ, ಕೊಲ್ಲಮೊಗ್ರು ಗ್ರಾಮ ಪಂಚಾಯತು ವ್ಯಾಪ್ತಿಯ ಕೊಲ್ಲಮೊಗ್ರು ಗ್ರಾಮದಲ್ಲಿ ಪ್ರಾರಂಭವಾಗಿರುವ ಮಧ್ಯ ಮಾರಾಟ ಕೇಂದ್ರದ ಬಗ್ಗೆ, ಚರ್ಚಿಸಲು ವಿಶೇಷ ಸಭೆಯನ್ನು ಅ.25 ರಂದು ಗ್ರಾಮ ಪಂಚಾಯತು ಅಧ್ಯಕ್ಷರಾದ ಉದಯ ಕೊಪ್ಪಡ್ಕ ನೇತೃತ್ವದಲ್ಲಿ ನಡೆಸಲಾಯಿತು.
ಗ್ರಾಮ ಪಂಚಾಯತು ಸದರಿ ಮದ್ಯ ಮಾರಾಟ ಕೇಂದ್ರ ನಡೆಸಲು ಯಾವುದೇ ಪರವಾನಿಗೆ ಅಥವಾ ನಿರಾಕ್ಷೇಪಣಾ ಪತ್ರ ನೀಡಿಲ್ಲ , ಎಂದು ಸಭೆಯಲ್ಲಿ ಸ್ಪಷ್ಟಪಡಿಸಲಾಯಿತು. ಈ ಬಗ್ಗೆ ಗ್ರಾಮಸ್ಥರ ಬೇಡಿಕೆಯಂತೆ ವಿಶೇಷ ಗ್ರಾಮ ಸಭೆ ನಡೆಸಲು ಸರ್ವಾನುಮತದಿಂದ ನಿರ್ಣಯಿಸಲಾಯಿತು . ಈ ಸಭೆಯಲ್ಲಿ ಗ್ರಾಮ ಪಂಚಾಯತು ಅಧ್ಯಕ್ಷರಾದ ಉದಯ ಕೊಪ್ಪಡ್ಕ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜಯಶ್ರೀ ಚಾಂತಾಳ, ಸದಸ್ಯರುಗಳಾದ ಮಾಧವ ಚಾಂತಾಳ, ಶುಭಲತಾ ಕಟ್ಟ, ಶಿವಮ್ಮ ಕಟ್ಟ, ಪುಷ್ಪರಾಜ್ ಪಡ್ಪು, ಮೋಹಿನಿ ಕಟ್ಟ ಅಶ್ವಥ್ ಯಲದಾಳು ಹಾಜರಿದ್ದರು.