ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಹಾಗೂ ಕೆ.ವಿ.ಜಿ. ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಎಲಿಮಲೆಯ ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಇಂದು ಎಲಿಮಲೆಯ ಸರಕಾರಿ ಪ್ರೌಢ ಶಾಲೆಯಲ್ಲಿ ಉದ್ಘಾಟನೆಗೊಂಡಿತು.
ಶಿಬಿರವನ್ನು ರಾಜ್ಯ ಒಕ್ಕಲಿಗ ಸಂಘದ ಉಪಾಧ್ಯಕ್ಷ ಹಾಗೂ ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಗೌರವ ಸಲಹೆಗಾರರಾದ ಡಾ| ರೇಣುಕಾಪ್ರಸಾದ್ ಕೆ.ವಿ. ಶಿಬಿರವನ್ನು ಉದ್ಘಾಟಿಸಿದರು. ದೇವಚಳ್ಳ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸುಲೋಚನಾ ದೇವ, ಉಪಾಧ್ಯಕ್ಷೆ ರಾಜೇಶ್ವರಿ, ನೆಲ್ಲೂರು ಕೆಮ್ರಾಜೆ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶೀಲಾವತಿ ಬೊಳ್ಳಾಜೆ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಮೋಹನರಾಮ ಸುಳ್ಳಿ,ನೆಲ್ಲೂರು ಕೆಮ್ರಾಜೆ ಸೊಸೈಟಿ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ಗುತ್ತಿಗಾರು ಸೊಸೈಟಿ ಉಪಾಧ್ಯಕ್ಷ ಕಿಶೋರ್ ಅಂಬೆಕಲ್ಲು ಮತ್ತಿತರರು ಅತಿಥಿಗಳಾಗಿ ಭಾಗವಹಿಸಿದ್ದರು. ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಅಧ್ಯಕ್ಷ ದೊಡ್ಡಣ್ಣ ಬರೆಮೇಲು ಅಧ್ಯಕ್ಷತೆ ವಹಿಸಿದ್ದರು. ಕೆ.ವಿ.ಜಿ.ಸುಳ್ಯ ಹಬ್ಬ ಸಮಿತಿ ಪೂರ್ವಾಧ್ಯಕ್ಷರುಗಳಾದ ಎನ್.ಎ.ರಾಮಚಂದ್ರ ಹಾಗೂ ಪಿ.ಸಿ.ಜಯರಾಮ, ಕೆ.ವಿ.ಜಿ.ಆಯುರ್ವೇದ ಕಾಲೇಜ್ ಪ್ರಾಂಶುಪಾಲ ಡಾ.ಡಿ.ವಿ.ಲೀಲಾಧರ್ ವೇದಿಕೆಯಲ್ಲಿ, ಸಮತಿ ಸಂಚಾಲಕ ಆನಂದ ಖಂಡಿಗ ಉಪಸ್ಥಿತರಿದ್ದರು.
ಕೆ.ವಿ.ಜಿ.ಯ ವೈದ್ಯರುಗಳಾದ ಡಾ.ರಂಗನಾಥ್ ಹಾಗೂ ಡಾ.ಹೇಮಂತ್ ಆರೋಗ್ಯ ಮಾಹಿತಿ ನೀಡಿದರು.
ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್ ಉಬರಡ್ಕ ಸ್ವಾಗತಿಸಿ, ಶಿಬಿರ ಸಂಚಾಲಕ ಶೈಲೇಶ್ ಅಂಬೆಕಲ್ಲು ವಂದಿಸಿದರು.