ಸುಳ್ಯದ ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಗೆ ತುರ್ತು ಚಿಕಿತ್ಸೆಯ ಅನುಕೂಲಕ್ಕಾಗಿ ನೂತನವಾಗಿ ಬಂದಿರುವ ಪಶು ಸಂಜೀವಿನಿ ವಾಹನವನ್ನು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಇಂದು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ನ.ಪಂ.ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ತಾ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್., ವಶು ವೈಧ್ಯಾಧಿಕಾರಿ ನಿತಿನ್ ಪ್ರಭು, ಮುಖಂಡರುಗಳಾದ ವೆಂಕಟ್ ವಳಲಂಬೆ, ನ.ಪಂ. ಸದಸ್ಯರು, ಗುತ್ತಿಗಾರು ಪಶು ವೈದ್ಯಾಧಿಕಾರಿ, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
- Thursday
- November 21st, 2024