
ಸುಳ್ಯದ ಕೆವಿಜಿ ಐಪಿಎಸ್ ನಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನ.2 ರಂದು ಆಚರಿಸಲಾಯಿತು. ಪ್ರಾಂಶುಪಾಲರಾದ ಅರುಣ್ ಕುಮಾರ್, ಉಪ ಪ್ರಾಂಶುಪಾಲರಾದ ಶಿಲ್ಪಾ, ಶಿಕ್ಷಕಿ ರೇಣುಕಾ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಂದ ನೃತ್ಯ, ನಾಟಕ ಹಾಡು, ಭಾಷಣ ಹಾಗೂ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸಮ್ಮುಖದಲ್ಲಿ ನಡೆಯಿತು. ಎಲ್ಲಾ ಸಹಶಿಕ್ಷಕರು ಕಾರ್ಯಕ್ರಮಕ್ಕೆ ಸಹಕರಿಸಿದರು. ನಾಡಗೀತೆಯೊಂದಿಗೆ ಕಾರ್ಯಕ್ರಮ ಸಮಾಪ್ತಿಯಾಯಿತು.