ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಪ್ರಕರಣವು ದೇಶದದ್ಯಾಂತ ಸಂಚಲನ ಮೂಡಿಸಿತ್ತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳ ಪತ್ತೆಗೆ ಎನ್.ಐ.ಎ ಅಧಿಕಾರಿಗಳು ಒಟ್ಟು 14 ಲಕ್ಷ ಹಣವನ್ನು ಘೋಷಣೆ ಮಾಡಿದ್ದಾರೆ.
ಪ್ರವೀಣ್ ನೆಟ್ಟಾರು ಪ್ರಕರಣದ ಆರೋಪಿಗಳ ಪತ್ತೆಗೆ ಸಹಕಾರಿಯಾಗಲು ಎನ್.ಐ.ಎ ಅಧಿಕಾರಿಗಳು ಪುತ್ತೂರು, ಸುಳ್ಯ, ಬೆಳ್ಳಾರೆಯಲ್ಲಿ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣದ ಹಾಗೂ ಇನ್ನಿತರ ಸಾರ್ವಜನಿಕ ಸ್ಥಳಗಳು ಸೇರಿ 40 ಕಡೆಗಳಲ್ಲಿ ನಾಲ್ಕು ಆರೋಪಿಗಳ ಫೋಟೋ ಇರುವ ವಾಂಟೆಡ್ ಪೋಸ್ಟರ್ ಅಂಟಿಸಿ, ಸುಳಿವು ಸಿಕ್ಕಿದ್ದಲ್ಲಿ ಪೊಲೀಸ್ರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.
- Friday
- November 1st, 2024