ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯದ ಹಲವಡೆ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದು ಮೂವರನ್ನು ಬಂಧಿಸಿದ್ದಾರೆ. ಎಸ್.ಡಿ.ಪಿ.ಐ ನ ಇಕ್ಬಾಲ್ ಬೆಳ್ಳಾರೆ, ಶಾಫಿ ಬೆಳ್ಳಾರೆ, ಇಬ್ರಾಹಿಂ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಎನ್ ಐಎ ಅಧಿಕಾರಿಗಳು ರಾಜ್ಯದ ಹಲವಡೆ ಮತ್ತೆ ದಾಳಿ ನಡೆಸಿದ್ದು, ದಕ್ಷಿಣ ಕನ್ನಡ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಹಲವಡೆ ನಿಷೇಧಿತ ಪಿಎಫ್ ಐ ಸಂಘಟನೆಯ ಮುಖಂಡರ ಮನೆಗಳ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
- Thursday
- November 21st, 2024