ಆಧುನಿಕತೆಯ ಹೆಸರಿನಲ್ಲಿ ನಮ್ಮ ಇಂದಿನ ಜೀವನ ಪದ್ಧತಿ, ಆಹಾರ ಪದ್ಧತಿ ಮತ್ತು ಪರಿಸರ ಕೂಡ ಆರೋಗ್ಯಕ್ಕೆ ಪೂರಕವಾಗಿಲ್ಲದಿರುವುದು ವಿಷಾಧನೀಯ ಎಂದು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಸುಳ್ಯ ಇದರ ಪ್ರಧಾನ ಕಾರ್ಯದರ್ಶಿ, ರಾಜ್ಯಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಹೇಳಿದರು. ಅವರು ಅ.30 ರಂದು ಕೆ.ವಿ.ಜಿ ಸುಳ್ಯ ಹಬ್ಬ ಸೇವಾ ಸಂಘ ಕೆ.ವಿ.ಜಿ ದಂತಮಹಾವಿದ್ಯಾಲಯ, ಕೆ.ವಿ.ಜಿ ಮೆಡಿಕಲ್ ಕಾಲೇಜು ಮತ್ತು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಎಲಿಮಲೆಯಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಮತ್ತು ಮಾಹಿತಿ ಕಾರ್ಯಗಾರದಲ್ಲಿ ಉದ್ಘಾಟಿಸಿ ಮಾತನಾಡುತ್ತಿದ್ದರು.
ಬದುಕಿನಲ್ಲಿ ಪ್ರತಿಯೊಬ್ಬರು ವಿಶ್ರಾಂತಿ ಇಲ್ಲದೆ ದುಡಿಯುತ್ತಿರುವುದು ಕೂಡಾ ಇದಕ್ಕೆ ಕಾರಣವಾಗಿರಬಹುದು. ಪ್ರತಿಯೊಬ್ಬರ ಒತ್ತಡದ ಜೀವನ ಪದ್ಧತಿ ನಮ್ಮ ಆರೋಗ್ಯಕ್ಕೆ ಮಾರಕವಾಗಿದೆ. ಆದುದರಿಂದ ಹಂತ ಹಂತವಾಗಿ ನಾವೆಲ್ಲರೂ ಸೂಕ್ತ ವೈದ್ಯರಿಂದ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಸಲಹೆ ಮತ್ತು ಮಾರ್ಗದರ್ಶನ ಪಡೆದು ಕೊಳ್ಳುವುದು ಅತಿ ಅಗತ್ಯ. ಇಂದಿನ ಶಿಬಿರದ ಪ್ರಯೋಜನವನ್ನು ಊರಿನ ಮತ್ತು ನೆರೆಯ ಊರಿನ ಎಲ್ಲಾ ಪಲಾನುಭವಿಗಳು ಪಡೆದುಕೊಳ್ಳಬೇಕು ಈ ಶಿಬಿರ ಅತ್ಯಂತ ಉಶಸ್ವಿಯಾಗಲೆಂದು ಶುಭಹಾರೈಸಿದರು. ವೇದಿಕೆಯಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುಲೋಚನಾ ದೇವ, ಉಪಾಧ್ಯಕ್ಷೆ ರಾಜೇಶ್ವರಿ, ನೆಲ್ಲೂರುಕೆಮ್ರಾಜೆ ಪಂಚಾಯತ್ ಅಧ್ಯಕ್ಷೆ ಶೀಲಾವತಿ ಬೊಳ್ಳಾಜೆ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ಅಧ್ಯಕ್ಷ ಎ.ವಿ.ತೀರ್ಥರಾಮ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಮೋಹನರಾಮ್ ಸುಳ್ಳಿ, ನೆಲ್ಲೂರುಕೆಮ್ರಾಜೆ ಸೊಸೈಟಿ ಅಧ್ಯಕ್ಷ ಉಘನಬವ, ಕೆ.ವಿ.ಜಿ ಆಯುರ್ವೇದಿಕ್ ಪ್ರಾಂಶುಪಾಲರಾದ ಡಾ.ಲೀಲಾಧರ ಡಿ.ವಿ ಕೆ.ವಿ.ಜಿ ಸುಳ್ಯ ಹಬ್ಬ ಸಮಿತಿ ಅಧ್ಯಕ್ಷ ದೊಡ್ಡಣ್ಣ ಬರೆಮೇಲು, ಶಿಬಿರ ಸಂಚಾಲಕ ಶೈಲೇಶ್ ಅಂಬೆಕಲ್ಲು ಸಹಿತ ಪದಾಧಿಕಾರಿಗಳು ಉಪಸ್ಥಿತರಿದ್ದರು.
- Thursday
- November 21st, 2024