ಸುಳ್ಯ ತಾಲೂಕು ಧ್ವನಿ ಬೆಳಕು ಮತ್ತು ಶಾಮಿಯಾನ ಮಾಲಕರ ಸಂಘದ 7 ನೇ ವಾರ್ಷಿಕೋತ್ಸವದ ಅಂಗವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಆಹ್ವಾನಿತ ತಂಡಗಳ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಮತ್ತು ಸನ್ಮಾನ ಸಮಾರಂಭವು ನ. 12 ರಂದು ಸಂಜೆ ಸುಳ್ಯ ಯುವಜನ ಸಂಯುಕ್ತ ಮಂಡಳಿಯ ಎದುರಿನ ಜೆ.ಓ.ಸಿ ಕ್ರೀಡಾಂಗಣದಲ್ಲಿ ನಡೆಯಲಿರುವುದು.
ಗೋಷ್ಠಿಯಲ್ಲಿ ಗೌರವಾಧ್ಯಕ್ಷ ಲೋಕನಾಥ್ ಎಸ್.ಪಿ,ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್, ಖಜಾಂಜಿ ಮಧುಸೂದನ್ ನಾಯರ್, ಸಂಘಟನಾ ಕಾರ್ಯದರ್ಶಿ ಶಾಫಿ ಪೈಚಾರು, ಗುರುದತ್ ನಾಯಕ್ ಸುಳ್ಯ, ಜತೆ ಕಾರ್ಯದರ್ಶಿ ಶಿವಪ್ರಕಾಶ್ ಸುಳ್ಯ ಉಪಸ್ಥಿತರಿದ್ದರು.