Ad Widget

ಬೀಚ್ ಸ್ವಚ್ಛತೆಗೆ ಕೈಜೋಡಿಸೋಣ: ಡಾ|| ಚೂಂತಾರು


ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸುರತ್ಕಲ್ ಘಟಕದ ವತಿಯಿಂದ ನ.5ರಂದು ಸುರತ್ಕಲ್ ಎನ್.ಐ.ಟಿ.ಕೆ ಕಡಲ ತೀರದಲ್ಲಿ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಮುಖ್ಯಪಾಲಕರಾದ ಡಾ|| ಮುರಲೀ ಮೋಹನ್ ಚೂಂತಾರು ಅವರ ನೇತೃತ್ವದಲ್ಲಿ ನಡೆಸಲಾಯಿತು. ಮಂಗಳೂರಿನಲ್ಲಿ ಹಲವಾರು ಸುಂದರ ರಮಣೀಯ ಕಡಲ ತೀರಗಳಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಮೂಜು ಮಸ್ತಿ ಮಾಡಲು ಬರುತ್ತಿದ್ದಾರೆ. ಆದರೆ ಮೋಜು ಮಸ್ತಿ ಮಾಡಿದ ಬಳಿಕ ಕಡಲ ತೀರದ ಸ್ವಚ್ಚತೆಗೂ ಅವರು ಗಮನ ಹರಿಸುವುದು ಅತೀ ಅಗತ್ಯ. ಎಲ್ಲೆಂದರಲ್ಲಿ ಪ್ಲಾಸ್ಟಿಕ್, ಬಾಟಲ್, ಕಸ ಕಡ್ಡಿಗಳನ್ನು ಹಾಕುವುದರಿಂದ ಪರಿಸರ ನಾಶದ ಜೊತೆಗೆ ಜಲಚರಗಳಿಗೂ ತೊಂದರೆ ಉಂಟಾಗುತ್ತದೆ. ಕಡಲತೀರದಲ್ಲಿ ಪರಿಸರ ಸ್ವಚ್ಛವಾಗಿಡಲು ಪ್ಲಾಸ್ಟಿಕ್ ತ್ಯಾಜ್ಯ, ಬಾಟಲುಗಳ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಎಸೆಯಬಾರದು, ಅವುಗಳನ್ನು ಸಮುದ್ರಕ್ಕೆ ಎಸೆಯದಂತೆ ಸಮುದ್ರ ತೀರದಲ್ಲಿ ಪ್ರವಾಸಿಗರಿಗೆ ಸೂಕ್ತ ಮಾರ್ಗದರ್ಶನ ಹಾಗೂ ಕಸದ ತೊಟ್ಟಿಗಳನ್ನು ಅಲ್ಲಲ್ಲಿ ಇಡುವುದರ ಮುಖಾಂತರ ತ್ಯಾಜ್ಯಗಳು ಸಮುದ್ರದ ನೀರಿಗೆ ಬೀಳದಂತೆ ಜಾಗೃತೆಯನ್ನು ವಹಿಸಬೇಕು ಎಂದು ನುಡಿದರು. ಇದರಿಂದ ನಮ್ಮ ಪರಿಸರದ ಸ್ವಚ್ಛತೆಯನ್ನು ಕಾಪಾಡುವುದಲ್ಲದೆ, ನಮ್ಮೆಲ್ಲರ ಆರೋಗ್ಯ ಹಿತದೃಷ್ಟಿಯಿಂದ ನಾವೆಲ್ಲರೂ ಕಡಲ ತೀರ ಸ್ವಚ್ಛತೆಗೆ ಕೈಜೋಡಿಸೋಣ ಎಂದು ನುಡಿದರು.
ಈ ಸಂದರ್ಭದಲ್ಲಿ ಸುರತ್ಕಲ್ ಘಟಕದ ಪ್ರಭಾರ ಘಟಕಾಧಿಕಾರಿ ಶ್ರೀ ರಮೇಶ್, ಗೃಹರಕ್ಷಕರಾದ ಮುತ್ತಪ್ಪ, ಭೀಮ, ಸುರೇಶ್, ಉಮೇಶ್, ಪಡಿಯಪ್ಪ, ದಿವಾಕರ್, ಮನೋರಮ, ಸಂಧ್ಯಾ, ಮಂಜುಳಾ ಮುಂತಾದವರು ಉಪಸ್ಥಿತರಿದ್ದರು.

. . . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!