Ad Widget

ಸಹಕಾರಿ ಧುರೀಣ ನಿತ್ಯಾನಂದ ಮುಂಡೋಡಿಯವರಿಗೆ ಸಹಕಾರ ರತ್ನ ಪ್ರಶಸ್ತಿ

. . . . . . .

ಕರ್ನಾಟಕ ರಾಜ್ಯ ಸರಕಾರ ನೀಡುವ ‘ಸಹಕಾರ ರತ್ನ’ ಪ್ರಶಸ್ತಿಗೆ ಹಿರಿಯ ಸಹಕಾರಿ ನಿತ್ಯಾನಂದ ಮುಂಡೋಡಿ ಅವರು ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನ.18ರಂದು ನಡೆಯುವ ರಾಜ್ಯ ಮಟ್ಟದ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ನಿತ್ಯಾನಂದ‌ ಮುಂಡೋಡಿ ಅವರಿಗೆ
ಸಹಕಾರ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. ಸಹಕಾರ ಚಳುವಳಿಯ ಬೆಳವಣಿಗೆಗೆ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತದೆ.‌ಕಳೆದ ಹಲವು ದಶಕಗಳಿಂದ ಸುಳ್ಯ ತಾಲೂಕಿನ ಹಾಗು ದ.ಕ.ಜಿಲ್ಲೆಯ ಸಹಕಾರಿ‌ ರಂಗದಲ್ಲಿ ಸಕ್ರೀಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸುಳ್ಯದ ಟಿಎಪಿಸಿಎಂಎಸ್ ಅಧ್ಯಕ್ಷರಾಗಿ, ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದಾರೆ. ಸುಳ್ಯದ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ, ಮಾಸ್ ಸಂಸ್ಥೆಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ರಾಜಕೀಯ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿಯೂ ಸಕ್ರೀಯರಾಗಿರುವ ನಿತ್ಯಾನಂದ ಮುಂಡೋಡಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!