ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ 2022-23ನೇ ಸಾಲಿನ ಚಂಪಾ ಷಷ್ಠಿ ಮಹೋತ್ಸವದ ಬಗ್ಗೆ ಪೂರ್ವಭಾವಿ ಸಭೆಯು ಸಚಿವರಾದ ಎಸ್.ಅಂಗಾರರವರ ಅಧ್ಯಕ್ಷತೆಯಲ್ಲಿ ದೇವಳದ ಆಡಳಿತ ಕಚೇರಿಯ ಮಹಡಿಯಲ್ಲಿ ಇಂದು ನಡೆಯಿತು. ಸಭೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ, ಜಿಲ್ಲಾಧಿಕಾರಿ ರವಿ ಕುಮಾರ್, ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ ಗಿರೀಶ್ ನಂದನ್, ಕಡಬ ತಹಶೀಲ್ದಾರ್ ರಮೇಶ್ ಬಾಬು, ಸುಳ್ಯ ತಹಶೀಲ್ದಾರ್ ಕು.ಅನಿತಾಲಕ್ಷ್ಮೀ, ಸುಬ್ರಹ್ಮಣ್ಯ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ಲಲಿತಾ ಗುಂಡಡ್ಕ ಸೇರಿದಂತೆ ದೇವಾಲಯದ ಆಡಳಿತ ಸಮಿತಿಯ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು, ದೇವಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.
- Friday
- November 1st, 2024