Ad Widget

ಕೆವಿಜಿ ಐಪಿಎಸ್ ನಲ್ಲಿ ಮಕ್ಕಳ ದಿನಾಚರಣೆ

. . . . . . . . .

ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನಲ್ಲಿ ನ.14 ರಂದು ಮಕ್ಕಳ ದಿನಾಚರಣೆಯನ್ನು ಶಾಲಾ ಸಭಾಂಗಣದಲ್ಲಿ ಅತಿ ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ.ವಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಜ್ವಲ್ ಯು. ಜೆ ಎಲ್ಲಾ ವಿದ್ಯಾರ್ಥಿಗಳಿಗೂ ಮಕ್ಕಳ ದಿನಾಚರಣೆಯ ಶುಭಾಶಯ ತಿಳಿಸಿದರು.
ಈ ಕಾರ್ಯಕ್ರಮದ ಮುಖ್ಯ ಅತಿಥಿ ಹತ್ತನೇ ತರಗತಿಯ ಶಿವಶಂಕರ್ ಮತ್ತು ಸೃಜನಾ, 5ನೇ ತರಗತಿಯ ಬೃಂದಾ ಜಿ ರಾವ್ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್, ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ನವರ ಜೊತೆ ಜವಾಹರ್ ಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಬಳಿಕ ಶಿಕ್ಷಕಿಯರು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು. ಆ ನಂತರ ಶಿಕ್ಷಕ ಮತ್ತು ಶಿಕ್ಷಕೇತರ ವೃಂದದವರು ವಿವಿಧ ನೃತ್ಯ ನಾಟಕ ಮತ್ತು ಮೂಕ ನಟನೆಗಳನ್ನು ಮಾಡುತ್ತ ವಿದ್ಯಾರ್ಥಿಗಳನ್ನು ಮನರಂಜಿಸಿದರು. ಚಿತ್ರಕಲಾ ಶಿಕ್ಷಕ ಮೆಲ್ವಿನ್ ನೆಹರು ಅವರ ಚಿತ್ರವನ್ನು ಐದು ನಿಮಿಷದಲ್ಲಿ ಮಾಡಿ ವಿದ್ಯಾರ್ಥಿಗಳು ಚಿತ್ರಕಲೆಯಲ್ಲಿ ಆಸಕ್ತಿ ಹೊಂದುವಂತೆ ಮಾಡಿದರು. ಬಳಿಕ ಎಲ್ ಕೆ ಜಿ ಯಿಂದ 10ನೇ ತರಗತಿಯ ವರೆಗಿನ ಎಲ್ಲಾ ಮಕ್ಕಳಿಗೂ ಕೆಲವು ಮನರಂಜನೆಯ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಕೊಟ್ಟು ಸನ್ಮಾನಿಸಲಾಯಿತು. ಬಳಿಕ ಎಲ್ಲಾ ವಿದ್ಯಾರ್ಥಿಗಳಿಗೂ ಸಿಹಿತಿಂಡಿ ವಿತರಣೆಯನ್ನು ಮಾಡಲಾಯಿತು.
ಈ ಕಾರ್ಯಕ್ರಮವನ್ನು ಶಿಕ್ಷಕಿ ತೇಜಸ್ವಿತ ನಿರೂಪಿಸಿ,ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ವಂದಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading