Ad Widget

ಎಣ್ಮೂರು ಪ್ರೌಢಶಾಲೆಯ ನೂತನ ಕೊಠಡಿಗೆ ಮಾನ್ಯ ಸಚಿವರಿಂದ ಶಂಕುಸ್ಥಾಪನೆ

ಸರಕಾರಿ ಪ್ರೌಢ ಶಾಲೆ ಎಣ್ಮೂರು ಇಲ್ಲಿಗೆ 2022-23 ನೇ ರಾಜ್ಯ ವಲಯದ ಮುಂದುವರಿದ ಯೋಜನೆಯಡಿ ಎರಡು ತರಗತಿ ಕೊಠಡಿಯು ಮಂಜೂರಾಗಿದ್ದು, ಇದಕ್ಕೆ ಕರ್ನಾಟಕ ಸರ್ಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್.ಅಂಗಾರ ರವರು ನವೆಂಬರ್ 14 ರಂದು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು”ಸರಕಾರ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆಯನ್ನು ನೀಡುತ್ತಿದ್ದು ಈ ವರ್ಷ ವಿವೇಕ ಯೋಜನೆಯಡಿ 8100 ತರಗತಿ ಕೊಠಡಿಯನ್ನು ಮಂಜೂರು ಮಾಡಿದೆ. ಅದರಲ್ಲಿ ಎರಡು ಕೊಠಡಿಗಳನ್ನು ಎಣ್ಮೂರು ಪ್ರೌಢಶಾಲೆಗೆ ನೀಡಲಾಗಿದೆ. ಇದರ ಕಾಮಗಾರಿ ಶೀಘ್ರವಾಗಿ ಮುಗಿದು ಮಕ್ಕಳಿಗೆ ಇದರ ಪ್ರಯೋಜನ ಸಿಗಬೇಕು ಮತ್ತು ಯಾವುದೇ ಕಾರಣಕ್ಕೂ ಇದರ ಗುಣಮಟ್ಟದಲ್ಲಿ ಲೋಪವಾಗದಂತೆ ನೋಡಿಕೊಳ್ಳುವಲ್ಲಿ ಎಲ್ಲರೂ ಗಮನ ಹರಿಸಬೇಕು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಾನಕಿ ಮುರುಳ್ಯ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಯುತ ಎಸ್.ಪಿ.ಮಹದೇವ , ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಶ್ರೀಮತಿ ಶೀತಲ್ ಯು.ಕೆ., ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀ ಪದ್ಮನಾಭ ಗೌಡ ಪೂದೆ, ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಶ್ರೀ ವಸಂತ ನಡುಬೈಲು, ಎಣ್ಮೂರು ಮುರುಳ್ಯ ಸಹಕಾರಿ ಬ್ಯಾಂಕ್ ನ ಕಾರ್ಯನಿರ್ವಹಣಾಧಿಕಾರಿ ಶ್ರೀ ಚಿದಾನಂದ ರೈ , ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಅನೂಪ್ ಬಿಳಿಮಲೆ, ಮತ್ತು ಎಸ್.ಡಿ.ಎಂ.ಸಿ ಸದಸ್ಯರು ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ಸುಮಿತ್ರಾ ಕೆ ಮತ್ತು ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

. . . . . . .

ಮುಖ್ಯ ಶಿಕ್ಷಕಿ ಶ್ರೀಮತಿ ಸುಮಿತ್ರಾ ಕೆ ಸ್ವಾಗತಿಸಿ, ಕನ್ನಡ ಭಾಷಾ ಶಿಕ್ಷಕಿ ಶ್ರೀಮತಿ ಉಷಾ .ಕೆ.ಎಸ್. ವಂದಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!