ಮಂಡ್ಯ ಹಾಗು ಮೈಸೂರಿನಲ್ಲಿ ಕಲಾ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಗುರುದೇವ ಲಲಿತಕಲಾ ಅಕಾಡೆಮಿಯ ವತಿಯಿಂದ ಕನಕಮಜಲಿನ ಕನಕ ಕಲಾ ಗ್ರಾಮದಲ್ಲಿ ರಾಷ್ಟ್ರಿಯ ಮಟ್ಟದ ನೃತ್ಯೋತ್ಸವ ಹಾಗು ಚಿತ್ರ ಕಲಾ ಪ್ರದರ್ಶನ ‘ಮೇದಿನಿ ಉತ್ಸವ’ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ| ಗಿರೀಶ್ ಭಾರಧ್ವಾಜ್ ನೆರವೇರಿಸಿದರು. ಗ್ರಾಮೀಣ ಪ್ರದೇಶದಲ್ಲಿ ಶಾಸ್ತ್ರೀಯ ನೃತ್ಯ ಕಲಾ ಪ್ರಕಾರಗಳ ಜಾಗೃತಿ ನಡೆಸುವ ಉದ್ದೇಶದಿಂದ ಮೂರ್ಜೆ ಶ್ರೀ ಮುತ್ತಣ್ಣ ಗೌಡ ಮತ್ತು ಶ್ರೀಮತಿ ನಳಿನಿ ಮುತ್ತಣ್ಣ ಗೌಡ ಅವರ ಸ್ಮರಣಾರ್ಥ ಎರಡು ದಿನಗಳ ಕಲಾ ಸಂಭ್ರಮ ‘ಮೇದಿನಿ ಉತ್ಸವ ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಯಾಗಿ ಪುತ್ತೂರಿನ ಎಸ್.ಡಿ.ಪಿ. ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಹರಿಕೃಷ್ಣ ಪಾಣಾಜೆ, ಗುರುದೇವ ಲಲಿತಕಲಾ ಅಕಾಡೆಮಿಯ ಕಲಾ ನಿರ್ದೇಶಕಿ ಡಾ.ಚೇತನಾ ರಾಧಾಕೃ ಷ್ಣ ಪಿ.ಎಂ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಗುಣವತಿ ಕೊಲ್ಲಂತ್ತಡ್ಕ, ಕನಕಮಜಲು ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ ಕುತ್ಯಾಳ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೂರ್ಜೆ ನಂದರವಂಶ ಒಕ್ಕಲಿಗ ಗೌಡ ತರವಾಡು ಟ್ರಸ್ಟ್‌ನ ಕೆ.ಎಸ್. ಗೋಪಾಲಕೃಷ್ಣ ಮೂರ್ಜೆ ವಹಿಸಿದ್ದರು.
ಗುರುದೇವ ಲಲಿತಕಲಾ ಅಕಾಡೆಮಿಯ ವ್ಯವಸ್ಥಾಪಕ ನಿರ್ದೇಶಕರಾದ ರಾಧಾಕೃಷ್ಣ ಪಿ.ಎಂ. ಸ್ವಾಗತಿಸಿ, ಕನಕಮಜಲು ಯುವಕ ಮಂಡಲದ ಅಧ್ಯಕ್ಷ ಚಂದ್ರಶೇಖರ ನೆಡಿಲು ವಂದಿಸಿದರು. ದಾಮೋದರ ಕಣಜಾಲು ಕಾರ್ಯಕ್ರಮ ನಿರೂಪಿಸಿದರು.
- Saturday
- November 23rd, 2024