Ad Widget

ಡಿ.4 ರಂದು ಎಲಿಮಲೆಯಲ್ಲಿ ಬೃಹತ್ ರಕ್ತದಾನ ಶಿಬಿರ

ಮಾವಿನಕಟ್ಟೆ ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್, ಗ್ರಾಮ ಪಂಚಾಯತ್ ದೇವಚಳ್ಳ, ಆರೋಗ್ಯ ಉಪಕೇಂದ್ರ ಎಲಿಮಲೆ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಆಶ್ರಯದಲ್ಲಿ ರೋಟರಿ ಕ್ಯಾಂಸ್ಕೋ ಬ್ಲಡ್ ಸೆಂಟರ್ ಪುತ್ತೂರು ಇವರ ಸಹಯೋಗದೊಂದಿಗೆ ರಕ್ತದಾನ ಶಿಬಿರ, ರಕ್ತವರ್ಗೀಕರಣ ಹಾಗೂ ಮಾಹಿತಿ ಶಿಬಿರ ಹಾಗೂ 100 ಬಾರಿಗೆ ರಕ್ತದಾನ ಮಾಡುತ್ತಿರುವ ಶೈಲೇಶ್ ಅಂಬೆಕಲ್ಲು ಅವರಿಗೆ ಸನ್ಮಾನ ಕಾರ್ಯಕ್ರಮ ಡಿ.4 ರಂದು ಆದಿತ್ಯವಾರ ಬೆಳಿಗ್ಗೆ ಗಂಟೆ 8.30ರಿಂದ 1.00ರ ತನಕ ಎಲಿಮಲೆ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.

. . . . . . . . .


ತಹಶೀಲ್ದಾರ್ ಕು. ಅನಿತಾಲಕ್ಷ್ಮಿ ಶಿಬಿರ ಉದ್ಘಾಟನೆ ನೆರವೇರಿಸಲಿದ್ದಾರೆ. ಗ್ರಾ.ಪಂ.ಅಧ್ಯಕ್ಷೆ ಸುಲೋಚನಾ ದೇವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಡಿ.ವೈ.ಎಸ್.ಪಿ. ವೀರಯ್ಯ ಹಿರೇಮಠ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಪಿ. ಮಹಾದೇವ್ ಉಪಸ್ಥಿತರಿರುವರು. ತಾಲೂಕು ಆರೋಗ್ಯಾಧಿಕಾರಿ
ಡಾ. ನಂದಕುಮಾರ್ ರಕ್ತದಾನದ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಎಲಿಮಲೆಯ ಮೈತ್ರೇಯ ಕ್ಲಿನಿಕ್ ನ ಡಾ. ಚೈತ್ರಭಾನು, ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿಯ ಅಧ್ಯಕ್ಷ ದೊಡ್ಡಣ್ಣ ಬರೆಮೇಲು, ಸುಳ್ಯದ ಯುವಜನಾ ಸೇವಾ ಸಂಸ್ಥೆಯ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಜಯಂತ ಹರ್ಲಡ್ಕ, ಗುತ್ತಿಗಾರು ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಚಂದ್ರಶೇಖರ ಕಡೋಡಿ ಆಗಮಿಸಲಿದ್ದಾರೆ. ದೇವಚಳ್ಳ ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಬಿ.ಗುರುಪ್ರಸಾದ್, ಎಲಿಮಲೆ ಸಮುದಾಯ ಆರೋಗ್ಯ ಕೇಂದ್ರದ ಕು. ಮೋನಿಷಾ ಜೆ.ಎಸ್‌., ಚಿರಾಯು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಜಯಂತ್ ಮೆತ್ತಡ್ಕ ಉಪಸ್ಥಿತರಿರಲಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading