ಕೆಪಿಸಿಸಿ ಕಾರ್ಯದರ್ಶಿ ಉದ್ಯಮಿ ಹೆಚ್ ಎಂ ನಂದಕುಮಾರ್ ರವರು ಜಾಲ್ಸೂರು ಗ್ರಾಮದ ಕಡಿಕಡ್ಕ ಕಾಲೋನಿಯಲ್ಲಿ ಕಳೆದ ಕೆಲವು ದಿನಗಳಿಂದ ಕ್ಯಾನ್ಸರ್ ಪೀಡಿತರಾಗಿ ಜೀವನ್ಮರಣ ಹೋರಾಟದಲ್ಲಿರುವ ಮಹಿಳೆಯ ಆರೋಗ್ಯ ವಿಚಾರಿಸಿ ಮನೆಯವರಿಗೆ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿಗಳು ಹಾಜರಿದ್ದು ಕಳೆದ 30 ವರ್ಷಗಳಿಂದ ತಮ್ಮ ತಮ್ಮ ಮನೆಯ ಅಡಿ ಸ್ಥಳ ಮಂಜೂರಾಗದೆ, ಯಾವುದೆ ಮೂಲ ಸೌಕರ್ಯಗಳಿಂದ ವಂಚಿತರಾಗಿರುವ ಬಗ್ಗೆ ತಮ್ಮ ಅಳಲು ತೋಡಿಕೊಂಡರು. ಇದಕ್ಕೆ ಸ್ಪಂದಿಸಿದ ನಂದಕುಮಾರ್ ರವರು ಈ ಬಗ್ಗೆ ಆಗಬೇಕಾಗಿರುವ ಕಾನೂನು ತೊಡಕುಗಳನ್ನು ನಿವಾರಿಸಿ ಶೀಘ್ರವಾಗಿ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಮಾಜಿ ತಾಲೂಕು ಪಂಚಾಯತ್ ಸದಸ್ಯ ತೀರ್ಥರಾಮ ಜಾಲ್ಸೂರು, ಮಾಜಿ ನಗರ ಪಂಚಾಯತ್ ಸದಸ್ಯ ಎಸ್ ಸಂಶುದ್ದಿನ್, ಭವಾನಿಶಂಕರ್ ಕಲ್ಮಡ್ಕ ಉಪಸ್ಥಿತರಿದ್ದರು.
- Thursday
- November 21st, 2024