ನೆಹರು ಮೆಮೋರಿಯಲ್ ಕಾಲೇಜಿನ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ನಾಂದಿ ಫೌಂಡೇಶನ್ ಸಂಸ್ಥೆಯ ವತಿಯಿಂದ ಕಾಲೇಜಿನ ವೃತ್ತಿ ನಿಯೋಜನಾ ಕೋಶದ ಮುಂದಾಳತ್ವದಲ್ಲಿ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಅಂತಿಮ ಪದವಿ ವಿದ್ಯಾರ್ಥಿನಿಯರಿಗೆ ೭ ದಿನಗಳ ಉಚಿತ ಮೃದು ಕೌಶಲ್ಯ ತರಬೇತಿ ಉದ್ಘಾಟನಾ ಕಾರ್ಯಕ್ರಮ ಡಿ.೫ರಂದು ಜರುಗಿತು. ಕಾರ್ಯಕ್ರಮವನ್ನು ವಿಶ್ವವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ ಹಾಗೂ ಜಿಲ್ಲಾ ಕೌಶಾಲ್ಯಾಭಿವೃದ್ಧಿ ಇಲಾಖೆಯ ಮುಖ್ಯಸ್ಥ ಎಸ್.ಜೆ ಹೇಮಚಂದ್ರ, ಉದ್ಘಾಟಿಸಿ ಉದ್ಯೋಗಿ ಆಕಾಂಕ್ಷಿಗಳಿಗೆ ವೃತ್ತಿ ಬಗ್ಗೆ ಮಾಹಿತಿ ನೀಡಿದರು. ನಾಂದಿ ಫೌಂಡೇಶನ್ ಸಂಸ್ಥೆಯ ಸುರೇಶ್ ಶಾಸ್ತ್ರೀಯವರು ಮೃದು ಕೌಶಲ್ಯತೆಯ ಅಗತ್ಯತೆಯನ್ನು ವಿವರಿಸಿದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ.ಎಂ.ಬಾಲಚಂದ್ರ ಗೌಡ, ವಿದ್ಯಾರ್ಥಿ ಕ್ಷೇಮಾಧಿಕಾರಿ ಶ್ರೀಮತಿ ರತ್ನಾವತಿ ಡಿ. ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರುದ್ರಕುಮಾರ್ ಎಂ.ಎಂ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾಲೇಜಿನ ವೃತ್ತಿ ನಿಯೋಜನಾ ಕೋಶಾಧಿಕಾರಿ ಡಾ. ವಿಜಯಲಕ್ಷ್ಮಿ ಎನ್.ಎಸ್ ಸ್ವಾಗತಿಸಿದರು. ಆಂತರಿಕ ಗುಣಮಟ್ಟ ಖಾತರಿ ಕೋಶದ ಅಧಿಕಾರಿ ಶ್ರೀಮತಿ ಮಮತಾ ಕೆ ವಂದಿಸಿದರು.
- Sunday
- November 24th, 2024