Ad Widget

ಪೋಲೀಸ್ ದೌರ್ಜನ್ಯವನ್ನು ಖಂಡಿಸಿ ಸುಳ್ಯ ವಕೀಲರ ಸಂಘದ ವತಿಯಿಂದ ಪ್ರತಿಭಟನೆ

. . . . . . . . .

ಪೋಲೀಸ್ ದೌರ್ಜನ್ಯ ಖಂಡಿಸಿ ವಕೀಲರ ಸಂಘದ ವತಿಯಿಂದ ಡಿ.7 ರಂದು ಸುಳ್ಯ ಕೋರ್ಟ್ ಬಳಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ವಕೀಲರ ಸಂಘದ ಅಧ್ಯಕ್ಷರಾದ ನಾರಾಯಣ ಪಾಟಾಳಿ ಮಾತನಾಡಿ ” ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಪೋಲೀಸರು ದೌರ್ಜನ್ಯ ನಡೆಸಿದ್ದಾರೆ ಹಾಗಾಗಿ ತಪ್ಪಿತಸ್ಥರ ವಿರುದ್ದ ಹೋರಾಟ ನಡೆಸಲಾಗುವುದು. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು” ಒತ್ತಾಯಿಸಿದರು. ಈ ಸಂದರ್ಭದಲ್ಲಿ ವಕೀಲರ ಸಂಘದ ಪದಾಧಿಕಾರಿಗಳಾದ ದಳ ಸುಬ್ರಾಯ ಭಟ್, ಸುಕುಮಾರ್ ಕೋಡ್ತುಗುಳಿ, ಹರೀಶ್ ಬೂಡುಪನ್ನೆ, ಜಗದೀಶ್ ದಿಲೀಪ್ ಬಾಬ್ಲುಬೆಟ್ಟು, ಪ್ರದೀಪ್ ಕೆ.ಎಲ್., ಸತೀಶ್ ಕುಂಭಕೋಡು, ದೀಪಕ್ ಕುತ್ತಮೊಟ್ಟೆ, ನಾಗೇಶ್ ಅಡ್ಕಾರು, ಅಬೂಬಕ್ಕರ್ ಅಡ್ಕಾರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading