ಕೇರ್ಪಡ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಡಿ. 15 ಮತ್ತು 16ರಂದು ಕ್ಷೇತ್ರದ ತಂತ್ರಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಗಳ ನೇತೃತ್ವದಲ್ಲಿ ವರ್ಷಾವಧಿ ಜಾತ್ರೋತ್ಸವ ನಡೆಯಲಿರುವುದು. ಡಿ.15ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ,ಆಚಾರ್ಯವರಣ, ಸ್ವಸ್ತಿ ಪುಣ್ಯಹ ವಾಚನ, ಮಹಾ ಗಣಪತಿ ಹೋಮ, ಚಂಡಿಕಾಯಾಗ ಪ್ರಾರಂಭ, ಹಸಿರು ಹೊರೆ ಕಾಣಿಕೆ ಸಮರ್ಪಣೆ, ಸುಹಾಸಿನಿ ಪೂಜೆ, ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ ,ಪ್ರಸಾದ ವಿತರಣೆ ಅನ್ನ ಸಂತರ್ಪಣೆ ನಡೆಯಲಿದೆ.
ಅದೇ ದಿನ ರಾತ್ರಿ ಶ್ರೀ ದೇವಿಗೆ ದೊಡ್ಡ ರಂಗಪೂಜೆ ,ಮಹಾಪೂಜೆ ಬಳಿಕ ಶ್ರೀದೇವರ ಬಳಿ ಹೊರಟು ಉತ್ಸವ ,ವಸಂತಕಟ್ಟೆ ಪೂಜೆ, ಬೆಡಿ ಪ್ರದರ್ಶನ ನಡೆಯಲಿದೆ. ಅಂದು ರಾತ್ರಿ 7.30 ರಿಂದ ಕಲ್ಲಡ್ಕ ವಿಠಲ ನಾಯಕ್ ಮತ್ತು ಬಳಗದವರಿಂದ ಗೀತಾ ಸಾಹಿತ್ಯ ಸಂಭ್ರಮ ನಡೆಯಲಿದೆ. ಡಿ. 16ರಂದು ಬೆಳಗ್ಗೆ ಮಹಾ ಗಣಪತಿ ಹೋಮ, ಕಲಶ ಪೂಜೆ ,ಶ್ರೀದೇವರ ಬಲಿ ಉತ್ಸವ, ದರ್ಶನ ಬಲಿ,ಬಟ್ಟಲು ಕಾಣಿಕೆ ಪ್ರಸಾದ ವಿತರಣೆ ಬಳಿಕ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಭೋಜನ ಪ್ರಸಾದ ನಡೆಯಲಿದೆ, ಸಂಜೆ 4 ರಿಂದ ಕೇರ್ಪಡ ಗೌಡ ಮನೆತನದ ಭಂಡಾರ ಮನೆಯಿಂದ ರಕ್ತೇಶ್ವರಿ ಮತ್ತು ಪರಿವಾರ ದೈವಗಳ ಭಂಡಾರ ದೇವಸ್ಥಾನಕ್ಕೆ ಬಂದು ನೇಮೋತ್ಸವ ನಡೆಯಲಿರುವುದು. ಎರಡು ದಿನಗಳ ಕಾಲ ನಡೆಯುವ ಉತ್ಸವದಲ್ಲಿ ಭಕ್ತಾದಿಗಳು ಪಾಲ್ಗೊಂಡು ಶ್ರೀದೇವಿ ಕೃಪೆಗೆ ಪಾತ್ರರಾಗಬೇಕೆಂದು ವ್ಯವಸ್ಥಾಪನಾ ಸಮಿತಿ ಮತ್ತು ಉತ್ಸವ ಸಮಿತಿ ಹಾಗೂ ವಿವಿಧ ಸಮಿತಿಯವರು ವಿನಂತಿಸಿದ್ದಾರೆ.
- Friday
- November 1st, 2024