Ad Widget

ಡಿ.10 ರಂದು ಮುರುಳ್ಯ ಎಣ್ಮೂರು ಸಹಕಾರಿ ಸಂಘದ ನೂತನ ಕಟ್ಟಡ “ಸಾಧನಾ ಸಹಕಾರ ಸೌಧ” ಲೋಕಾರ್ಪಣೆ

ಮುರುಳ್ಯ-ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಸಾಧನ ಸಹಕಾರ ಸೌಧ ಲೋಕಾರ್ಪಣೆ ಸಮಾರಂಭ ಡಿ. 10 ರಂದು ನಿಂತಿಕಲ್ ನಲ್ಲಿ ನಡೆಯಲಿದೆ.
ಸಮಾರಂಭದ ಅಧ್ಯಕ್ಷತೆಯನ್ನು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ವಹಿಸಲಿದ್ದಾರೆ. ರಾಜ್ಯದ ಸಹಕಾರ ಸಚಿವರಾದ ಎಸ್‌. ಟಿ .ಸೋಮಶೇಖ‌ರ ಸಾಧನಾ ಸಹಕಾರ ಸೌಧವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಆಡಳಿತ ಕಚೇರಿ ಉದ್ಘಾಟನೆ ಮತ್ತು ದೀಪ ಪ್ರಜ್ವಲನೆಯನ್ನು ಕರ್ನಾಟಕ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಹಾಗೂ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ, ಸಹಕಾರ ರತ್ನ ಡಾ ಎಂ.ಎನ್. ರಾಜೇಂದ್ರ ಕುಮಾರ್ ನೆರವೇರಿಸಲಿದ್ದಾರೆ. ಸಂಸದರಾದ ನಳಿನ್ ಕುಮಾರ್, ಕಟೀಲ್‌ ಭದ್ರತಾ ಕೊಠಡಿ ಉದ್ಘಾಟನೆ ಮಾಡಲಿದ್ದಾರೆ. ಇಂಧನ ಮತ್ತು ಕನ್ನಡ, ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್ ವಸತಿ ಸಮುಚ್ಚಯ ಉದ್ಘಾಟನೆ ಮಾಡಲಿದ್ದಾರೆ. ವಾಣಿಜ್ಯ ಸಂಕೀರ್ಣದ ಉದ್ಘಾಟನೆಯನ್ನು ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಲಿದ್ದಾರೆ. ಅತಿಥಿಗಳಾಗಿ ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಬೆಳ್ಳಿಪ್ಪಾಡಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಬಿ.ಜಯರಾಮ, ಗ್ರಾ.ಪಂ.ಅಧ್ಯಕ್ಷೆ ಕು.ಜಾನಕಿ ಮುರುಳ್ಯ, ಎಡಮಂಗಲ ಗ್ರಾ.ಪಂ.ಅಧ್ಯಕ್ಷೆ ಗೀತಾ ಪ್ರವೀಣ್, ನಬಾರ್ಡ್ ಡಿಡಿಎಂ ಸಂಗೀತ ಎಸ್ ಕರ್ತ, ಮಂಗಳೂರಿನ ಸಹಕಾರಗಳ ಸಂಘಗಳ ಉಪನಿಬಂಧಕ ಹೆಚ್.ಎನ್.ರಮೇಶ, ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀಮತಿ ತ್ರಿವೇಣಿ ರಾವ್ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತರಾದ ಕೆ. ಸೀತಾರಾಮ ರೈ ಸವಣೂರು ಮತ್ತು ನಿತ್ಯಾನಂದ ಮುಂಡೋಡಿ ಯವರನ್ನು ಸನ್ಮಾನಿಸಲಾಗುವುದು. ಕಟ್ಟಡ ನಿರ್ಮಾಣಕ್ಕೆ ಸಹಕರಿಸಿದ ಹಾಗೂ ಸ್ಥಳ ದಾನಿಗಳು, ಮಾಜಿ ಅಧ್ಯಕ್ಷರು,ಉಪಾಧ್ಯಕ್ಷರು, ನಿರ್ದೇಶಕರು ಮತ್ತಿತರರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಮತ್ತು ಶ್ರೀಮತಿ ಪೂರ್ಣಿಮಾ ಯತೀಶ್ ರೈ ಚೆಲ್ಯಡ್ಕ ಅವರ ಸಾರಥ್ಯದಲ್ಲಿ ಜಿಲ್ಲೆಯ ಪ್ರಸಿದ್ಧ ವೃತ್ತಿಪರ ಕಲಾವಿದರ ಹಾಗೂ ಮಹಿಳಾ ಕಲಾವಿದರ ಕೂಡುವಿಕೆಯಲ್ಲಿ ಶ್ರೀಕೃಷ್ಣ ಲೀಲಾ- ಕಂಸ ವಧೆ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಗ್ರಾಮಸ್ಥರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಅಧ್ಯಕ್ಷರಾದ ವಸಂತ ಗೌಡ ಹುದೇರಿ ಮತ್ತು ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿದಾನಂದ ರೈ ವಿನಂತಿಸಿದ್ದಾರೆ.

. . . . . .

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!