ನಿಂತಿಕಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮುರುಳ್ಯ-ಎಣ್ಮೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಪ್ರಧಾನ ಕಛೇರಿ ಹಾಗೂ ವಾಣಿಜ್ಯ ಕಟ್ಟಡ ಸಾಧನ ಸಹಕಾರ ಸೌಧ ಇಂದು ಲೋಕಾರ್ಪಣೆಗೊಂಡಿತು.
ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಲೋಕಾರ್ಪಣೆಗೊಳಿಸಿದರು.
ಆಡಳಿತ ಕಚೇರಿ ಉದ್ಘಾಟನೆಯನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬೊಲ್ಯೊಟ್ಟು ನೆರವೇರಿಸಿದರು.ಭದ್ರತಾ ಕೊಠಡಿಯನ್ನು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸೀತಾರಾಮ ರೈ ಸವಣೂರು ನೆರವೇರಿಸಿದರು.ವಸತಿ ಸಮುಚ್ಚಯವನ್ನು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಬೆಳ್ಳಿಪ್ಪಾಡಿ ಉದ್ಘಾಟಿಸಿದರು. ವಾಣಿಜ್ಯ ಸಂಕೀರ್ಣ ಉದ್ಘಾಟನೆ ಯನ್ನು ಗುತ್ತಿಗಾರು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ನೆರವೇರಿಸಿದರು. ಅತಿಥಿಗಳಾಗಿ ಕರ್ನಾಟಕ ಮೀನುಗಾರಿಕಾ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಬಿ.ಜಯರಾಮ, ಗ್ರಾ.ಪಂ.ಅಧ್ಯಕ್ಷೆ ಕು.ಜಾನಕಿ ಮುರುಳ್ಯ, ಎಡಮಂಗಲ ಗ್ರಾ.ಪಂ.ಅಧ್ಯಕ್ಷೆ ಗೀತಾ ಪ್ರವೀಣ್, ನಬಾರ್ಡ್ ಡಿಡಿಎಂ ಸಂಗೀತ ಎಸ್ ಕರ್ತ, ಮಂಗಳೂರಿನ ಸಹಕಾರಗಳ ಸಂಘಗಳ ಉಪನಿಬಂಧಕ ಹೆಚ್.ಎನ್.ರಮೇಶ, ಪುತ್ತೂರು ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಶ್ರೀಮತಿ ತ್ರಿವೇಣಿ ರಾವ್ ಆಗಮಿಸಿದ್ದರು. ಸಹಕಾರಿ ಸಂಘದ ಅಧ್ಯಕ್ಷ ವಸಂತ ಗೌಡ ಹುದೇರಿ, ಉಪಾಧ್ಯಕ್ಷೆ ಕುಸುಮಾವತಿ ರೈ ಕೆ.ಜಿ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿದಾನಂದ ರೈ ಎನ್.,ನಿರ್ದೇಶಕರಾದ ರಘುನಾಥ್ ರೈ ಕಟ್ಟಬೀಡು, ವಸಂತ ನಡುಬೈಲು, ರೂಪರಾಜ ರೈ, ಭಾಗೀರಥಿ ಮುರುಳ್ಯ,ಶೇಖರ ಸಾಲ್ಯಾನ್, ರಾಜಶೇಖರ ಶೃಂಗೇರಿ, ದಿನೇಶ್ ಹೆಚ್., ದಿನೇಶ್ ಎ.,ಪುರುಷೋತ್ತಮ ಆಚಾರ್ಯ, ನಳಿನಿ ಸೀತಾರಾಮ ರೈ, ಕಟ್ಟಡ ಸಮಿತಿಯ ಪ್ರಸನ್ನ ಕೆ., ರಮೇಶ್ ಕೋಟೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.