ಶಿಸ್ತು, ಆರೋಗ್ಯ ವರ್ಧನೆಗೆ ಕ್ರೀಡೆ ಸಹಕಾರಿ.ಕ್ರೀಡಾ ಸ್ಫೂರ್ತಿಯಿಂದ ಭಾಗವಹಿಸುವುದು ಬಹಳ ಮುಖ್ಯ, ಎಲ್ಲರೂ ಕ್ರೀಡಾ ಚಟುವಟಿಕೆಯಲ್ಲಿ ಉತ್ತಮ ರೀತಿಯಲ್ಲಿ ತೊಡಗಿಸಿಕೊಳ್ಳಿ ಎಂದು ಎ ಓ ಎಲ್ ಇ (ರಿ )ಸುಳ್ಯ ಇದರ ಅಧ್ಯಕ್ಷರಾದ ಡಾ ಕೆ ವಿ ಚಿದಾನಂದ ಅವರು ಹೇಳಿದರು. ಅವರು ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನಲ್ಲಿ ಆಯೋಜಿಸಿದ್ದ ಕ್ರೀಡಾಕೂಟದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಕ್ರೀಡಾಕೂಟವನ್ನು ಕ್ರೀಡಾ ಜ್ಯೋತಿ ಬೆಳಗಿಸಿ ಉದ್ಘಾಟನೆ ನೆರವೇರಿಸಿದ ಸಂಸ್ಥೆಯ ಆಡಳಿತ ಮಂಡಳಿಯ ಶ್ರೀಮತಿ ಶೋಭಾ ಚಿದಾನಂದ ಅವರು ಮಾತನಾಡಿ ಕ್ರೀಡೆಯಲ್ಲಿ ಗೆಲುವಿಗಿಂತ ಭಾಗವಹಿಸುವುದು ಬಹಳ ಮುಖ್ಯ. ಎಲ್ಲಾ ವಿದ್ಯಾರ್ಥಿಗಳು ಕ್ರೀಡಾ ಸ್ಫೂರ್ತಿಯಿಂದ ಸಕ್ರಿಯವಾಗಿ ಭಾಗವಹಿಸಿ ಎಂದು ಶುಭ ಹಾರೈಸಿದರು.ಸಂಸ್ಥೆಯ ಅಧ್ಯಕ್ಷರಾದ ಡಾ.ಕೆ.ವಿ. ಚಿದಾನಂದ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು.
ವೇದಿಕೆಯಲ್ಲಿ ಸಂಸ್ಥೆಯ ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ,ಪದವಿ ವಿಭಾಗದ ಪ್ರಾoಶುಪಾಲರಾದ ಪ್ರೊ ಎಂ ಎಂ ರುದ್ರ ಕುಮಾರ್,ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿ ಕರಿಗಳಾದ ದಾಮೋದರ ಪಿ,ಸಾವಿತ್ರಿ ಕೆ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಅಭಿಷೇಕ್ ಎಂ ಮತ್ತು ಅಂಬಿಕಾ ಕೆ ಎಸ್ ಪ್ರಾರ್ಥಿಸಿದರು.ವಿದ್ಯಾರ್ಥಿ ಕ್ಷೇಮಾಧಿಕಾರಿ ಸಾವಿತ್ರಿ ಕೆ ಸ್ವಾಗತಿಸಿದರು.ಕ್ರೀಡಾ ಕಾರ್ಯದರ್ಶಿ ಕೆ.ಪಿ ಮಹಮ್ಮದ್ ಅನಾಸ್ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು.ಆರಂಭದಲ್ಲಿ ಎನ್ ಸಿ ಸಿ ವಿದ್ಯಾರ್ಥಿಗಳ ಆಕರ್ಷಕ ಬ್ಯಾಂಡ್ ಸೆಟ್ ನೊಂದಿಗೆ ವಿದ್ಯಾರ್ಥಿಗಳ ಪಥ ಸಂಚಲನ ನಡೆಯಿತು.ಪದವಿ ವಿಭಾಗದ ದೈ ಶಿ ನಿರ್ದೇಶಕ ಲೆಫ್ಟಿನೆಂಟ್ ಸೀತಾರಾಮ ಎಂ ಡಿ,ಹಾಗೂ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ದೈ ಶಿ ನಿರ್ದೇಶಕ ಮಿಥನ್ ಕ್ರೀಡಾಕೂಟದಲ್ಲಿ ಸಹಕರಿಸಿದರು.ಉಪನ್ಯಾಸಕರಾದ ವಿನಯ ನಿಡ್ಯಮಲೆ,ವಿನುತ ಕೆ ಎನ್,ವಿದ್ಯಾರ್ಥಿ ನಾಯಕ ಧ್ಯಾನ್ ವಿಜಯ್ ನಿರೂಪಿಸಿದರು.ವಿ.ಕ್ಷೇಮಾಧಿಕಾರಿ ದಾಮೋದರ ಪಿ ವಂದಿಸಿದರು.ಈ ಸಂದರ್ಭದಲ್ಲಿ ಬೋಧಕ ಬೋಧಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕ್ರೀಡಾ ಸಾಧಕರಾದ ಕೆ ಪಿ ಮಹಮ್ಮದ್ ಅನಾಸ್, ಮನು ಶ್ರೀನಿವಾಸ ನಾಯ್ಕ್, ಚಂದನ್,ಸುಜಿತ್ ಏನೇಕಲ್ , ತೃಪ್ತಿ ಎಂ ಟಿ, ರೋಜಾ ಜಿ ಎಂ ಇವರು ಕ್ರೀಡಾ ಜ್ಯೋತಿಯೊಂದಿಗೆ ಆಗಮಿಸಿದರು.ಆಕರ್ಷಕ ಪಥ ಸಂಚಲನದ ವಿಜೇತರಿಗೆ ಈ ಸಂದರ್ಭದಲ್ಲಿ ಬಹುಮಾನ ವಿತರಿಸಲಾಯಿತು.
- Thursday
- November 21st, 2024