ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಕೊಡಗು ಮತ್ತು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಜಂಟಿ ಆಶ್ರಯದಲ್ಲಿ ಕೊಕ್ಕೋ ಬೆಳೆಯ ಸಮಗ್ರ ನಿರ್ವಹಣೆ ಮತ್ತು ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ ಬಗ್ಗೆ ವಿಚಾರಗೋಷ್ಠಿ ಮತ್ತು ಪ್ರಾತ್ಯಕ್ಷಿಕೆಯು ಡಿ.14 ರಂದು ಸಹಕಾರ ಸದನದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರು ಹಾಗೂ ತಾಲೂಕು ಸಾಗುವುಳಿ ಸಕ್ರಮೀಕರಣ ಸಮಿತಿ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿಯವರು ವಹಿಸಿದ್ದರು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಚಂದ್ರಕಲಾ ಬಾಲಚಂದ್ರ ಬಳ್ಳಡ್ಕ ರವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರಾದ ಮುತ್ತಪ್ಪ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಯಾಂಪ್ಕೋ ಸಂಸ್ಥೆಯ ಸಿಬ್ಬಂದಿಯವರಾದ ಚಂದ್ರಶೇಖರ ಕೆ ಇವರು ಕೊಕ್ಕೋ ಬೆಳೆಯ ಮರ ಸವರುವಿಕೆ (ಪ್ರೂನಿಂಗ್) ಮತ್ತು ಕೋಕೋ ಬೆಳೆ ಸಮಗ್ರ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಹಾಗೂ ಸಂಘದ ರೈತ ಸದಸ್ಯರಾದ ಪುರುಷೋತ್ತಮ ನಡುಬೈಲು ಇವರ ತೋಟದಲ್ಲಿ ಪ್ರಾತ್ಯಕ್ಷಿಕೆ ಮೂಲಕ ಸದಸ್ಯರಿಗೆ ತರಬೇತಿಯನ್ನು ನೀಡಿದರು. ನಂತರ ಸಹಾಯಕ ತೋಟಗಾರಿಕಾ ಅಧಿಕಾರಿ ಡಾ.ವಿಜೇತ್ ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ ಹೆಚ್ ಕೆ ಪ್ರಾರ್ಥನೆಗೈದು ಕಾರ್ಯಕ್ರಮವನ್ನು ನಿರೂಪಿಸಿದರು. ಸಹಾಯಕ ತೋಟಗಾರಿಕಾ ಅಧಿಕಾರಿಯವರಾದ ಡಾ. ವಿಜೇತ್ ಎಸ್ ಸ್ವಾಗತಿಸಿದರು. ಸಭೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ಅಶೋಕ ಪಿ ಎಂ ಹಾಗೂ ಸಂಸ್ಥೆಯ ನಿರ್ದೇಶಕರುಗಳು, ಗ್ರಾಮ ಪಂಚಾಯತ್ ಪೆರಾಜೆಯ ಸದಸ್ಯರು ಉಪಸ್ಥಿತರಿದ್ದರು. ಸಾಮೂಹಿಕ ಸಹಭೋಜನದೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.