Ad Widget

ಆರೋಗ್ಯಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಿ – ಸಚಿವ ಅಂಗಾರ – ದುಗ್ಗಲಡ್ಕದಲ್ಲಿ ನಮ್ಮ ಕ್ಲಿನಿಕ್ ಸೇವೆ ಆರಂಭ

ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ಪ್ರಾರಂಭಿಸುತ್ತಿರುವ “ನಮ್ಮ ಕ್ಲಿನಿಕ್” ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ದುಗ್ಗಲಡ್ಕದಲ್ಲಿ ಡಿ.14ರಂದು ಕಾರ್ಯಾರಂಭಗೊಂಡಿತು. ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರವನ್ನು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್.ಅಂಗಾರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಸರಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮನಾಂತರವಾಗಿ ದೊರೆಯಬೇಕು. ಇದನ್ನು ಜನರು ಸದೂಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ ಅಧ್ಯಕ್ಷತೆ ವಹಿಸಿದ್ದರು.
ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ನಗರ ಪಂಚಾಯತ್ ಸದಸ್ಯರಾದ ಶಶಿಕಲಾ ನೀರಬಿದಿರೆ, ಬಾಲಕೃಷ್ಣ ರೈ, ಕಟ್ಟಡ ಮಾಲಕರಾದ ಶ್ಯಾಮ್ ಭಟ್, ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿ ಸುಳ್ಯ ತಾಲೂಕು ನೋಡಲ್ ಅಧಿಕಾರಿ ಡಾ.ಜಗದೀಶ್ ಕೆ, ಸುಳ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ನಂದಕುಮಾರ್, ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ.ಹೆಚ್.ಸುಧಾಕರ್, ಸೇರಿದಂತೆ ಜನಪ್ರತಿನಿಧಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading