Ad Widget

ಹಲಾಲ್ ಪ್ರಮಾಣ ಪತ್ರ ನಿಷೇಧಿಸಿ ಮತ್ತು ಲವ್ ಜಿಹಾದ್ ವಿರೋಧಿ ಪೋಲಿಸ್ ದಳವನ್ನು ಸ್ಥಾಪಿಸಲು ಹಿಂದೂ ಜನಜಾಗೃತಿ ಸಮಿತಿ ಸರಕಾರಕ್ಕೆ ಮನವಿ

. . . . . .

ರಾಜ್ಯದಲ್ಲಿ ಅನಧಿಕೃತವಾಗಿ ಧರ್ಮದ ಆಧಾರದ ಮೇಲೆ ಹಲಾಲ್ ಲೋಗೊ ಇರುವ ಪ್ರಮಾಣಪತ್ರವನ್ನು ಸಾರ್ವಜನಿಕರು ಉಪಯೋಗ ಮಾಡುವ ಉತ್ಪನ್ನಗಳ ಮೇಲೆ ಮುದ್ರಣ ಮಾಡಿ, ಸಾವಿರಾರು ಕೋಟಿ ರೂಪಾಯಿಗಳನ್ನು ಮತಾಂದ ಸಂಘಟನೆಗಳು ಸಂಗ್ರಹ ಮಾಡಿ, ದೇಶ ವಿರೋಧಿ ಚಟುವಟಿಕೆಗಳಿಗೆ ಉಪಯೋಗ ಮಾಡಲಾಗುತ್ತಿವೆ. ಕೇಂದ್ರ ಸರಕಾರದ FSSAI ಅಧಿಕೃತ ಪ್ರಮಾಣಪತ್ರ ನೀಡುವ ಸಂಸ್ಥೆ ಇರುವಾಗಲೂ ಸಹ ಧರ್ಮದ ಆಧಾರದಲ್ಲಿ ಹಲಾಲ್ ಪ್ರಮಾಣ ಪತ್ರ ನೀಡುವುದು ಸಂವಿಧಾನ ಬಾಹಿರವಾಗಿದೆ. ಇದನ್ನು ಕೂಡಲೇ ನಿಷೇಧ ಮಾಡಬೇಕು, ಹಲಾಲ್ ಪ್ರಮಾಣ ಪತ್ರ ನೀಡುವ ಹಣ ದೇಶದ್ರೋಹಿ ಚಟುವಟಿಕೆಗೆ ಉಪಯೋಗದ ಬಗ್ಗೆ ತನಿಖೆ ಮಾಡಬೇಕು ಇದಕ್ಕೆ ಸಂಬಂಧಿಸಿ ಈ ಚಳಿಗಾಲದ ಅಧಿವೇಶನದಲ್ಲಿ ‘ಹಲಾಲ ಪ್ರಮಾಣಪತ್ರ’ ನಿಷೇಧ ಮಾಡುವ ಕಾಯಿದೆ ತರಬೇಕು’ ಎಂದು ಆಗ್ರಹ ಮಾಡಲಾಯಿತು. ಹಾಗೂ ‘ಲವ್ ಜಿಹಾದ್’ ಪ್ರಕರಣಗಳ ತನಿಖೆ ನಡೆಸಲು ಉತ್ತರ ಪ್ರದೇಶ ಸರ್ಕಾರದ ಮಾದರಿಯಲ್ಲಿ ಪೊಲೀಸ್ ವಿಶೇಷ ಶಾಖೆಯನ್ನು ಸ್ಥಾಪಿಸಬೇಕು. ಇಂತಹ ಪ್ರಕರಣಗಳಲ್ಲಿ ‘ಲವ್ ಜಿಹಾದ್’ ಹೆಸರಿನಲ್ಲಿ ಅಪರಾಧಗಳನ್ನು ದಾಖಲಿಸಬೇಕೆಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ಸುಳ್ಯ ಉಪ ತಹಶೀಲ್ದಾರರಾದ ಮಂಜುನಾಥ ಇವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ರಾಧಾಕೃಷ್ಣ, ವಸಂತಿ, ನಂದಕುಮಾರ್, ಅನಂತ ಕೃಷ್ಣ , ರಾಮಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!