ಸುಳ್ಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್ ಪಿ ಮಹಾದೇವ್ ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಸರಕಾರದ ಅಧೀನ ಕಾರ್ಯದರ್ಶಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವರ್ಗಾವಣೆ ಆದೇಶ ಹೊರಡಿಸಿದ್ದು, ಸದ್ಯ ಅವರನ್ನು ಕೂಡಿಗೆಗೆ ವರ್ಗಾಯಿಸಲಾಗಿದೆ. “ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ” ತಕ್ಷಣದಿಂದ ಜಾರಿಗೆ ಬರುವಂತೆ ಆದೇಶವನ್ನು ಹೊರಡಿಸಲಾಗಿದೆ ಎಂದು ತಿಳಿಸಲಾಗಿದೆ. ಕಳೆದ ಕೆಲವು ವರ್ಷಗಳಿಂದ ಅವರು ಸುಳ್ಯ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಅವರು ರಜೆಯಲ್ಲಿ ತೆರಳಿದ್ದರು ಎಂದು ಹೇಳಲಾಗಿತ್ತು.
- Thursday
- November 21st, 2024