ಇಂಧನ ಸಚಿವ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಇಂದು ಸುಳ್ಯ ಪ್ರವಾಸ ಕೈಗೊಳ್ಳಲಿದ್ದು ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಜ. 10 ರಂದು ಬೆಳಿಗ್ಗೆ 9 ಗಂಟೆಗೆ ಸುಳ್ಯದ ಕಲ್ಚರ್ಪೆಗೆ ಆಗಮಿಸಿ ಸುಳ್ಯ ನಗರ ಪಂಚಾಯತ್ನ ಘನತ್ಯಾಜ್ಯ ಘಟಕದ ಗ್ಯಾಸಿಫಿಕೇಷನ್ ಯಂತ್ರದ ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ. 10.30ಕ್ಕೆ ಸುಳ್ಯದ ಅಂಬಟಡ್ಕದಲ್ಲಿ 110 ಕೆವಿ ವಿದ್ಯುತ್ ಉಪ ಕೇಂದ್ರ ಸುಳ್ಯ ಮತ್ತು 110 ಕೆವಿ ಮಾಡಾವು ಸುಳ್ಯ ವಿದ್ಯುತ್ ಪ್ರಸರಣಾ ಮಾರ್ಗದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಸುಳ್ಯದ ಬೆಳ್ಳಾರೆಯಲ್ಲಿ ಡಾ. ಕೆ. ಶಿವರಾಮ ಕಾರಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯ ಕಟ್ಟಡ ಉದ್ಘಾಟಿಸಲಿದ್ದಾರೆ.
- Thursday
- November 21st, 2024